24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

ಧರ್ಮಸ್ಥಳ: ಪಂಚನಮಸ್ಕಾರ ಮಂತ್ರಪಠಣ, ಭಜನೆ, ಸ್ತೋತ್ರ, ಪೂಜಾಮಂತ್ರ ಪಠಣ, ಅಷ್ಟ ವಿಧಾರ್ಚನೆ ಪೂಜೆ, ಭಕ್ತಾಮರದಿಂದ ಶ್ಲೋಕಗಳ ಪಠಣ, ವರ್ಣನೆ, ನೃತ್ಯ ಪ್ರದರ್ಶನ ಮೊದಲಾದ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಡಿ.13 ರಂದು ರಾತ್ರಿ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ವೈಭವದಿಂದ ನಡೆಯಿತು.


ಹೆಗ್ಗಡೆಯವರ ನಿವಾಸ ಬೀಡಿನಿಂದ ಮಹೋತ್ಸವ ಸಭಾಭವನಕ್ಕೆ ಭವ್ಯ ಮೆರವಣಿಗೆ ಬಳಿಕ ಅಲ್ಲಿ ಅಷ್ಟವಿಧಾರ್ಚನೆ ಪೂಜೆ ನಡೆಯಿತು. ಅರಹಂತ ಪೂಜೆ, ಸಿದ್ಧಪರಮೇಷ್ಠಿಗಳ ಪೂಜೆ, ಬಾಹುಬಲಿ ಸ್ವಾಮಿ ಪೂಜೆ, ಶ್ರುತ ಪೂಜೆ ಮತ್ತು ಗಣಧರಪರಮೇಷ್ಠಿ ಪೂಜೆ ನಡೆಯಿತು. ಶಿಶಿರ್ ಇಂದ್ರರು ಮಂತ್ರ ಪಠಣ ಮಾಡಿದರು. ಸೌಮ್ಯ, ಮಂಜುಳಾ, ಸಾವಿತ್ರಿ ಮತ್ತು ಅರುಣಾ ಅವರ ಸುಶ್ರಾವ್ಯ ಹಾಡಿಗೆ ಹಿಮ್ಮೇಳದಲ್ಲಿ ತಬಲಾವಾದಕರಾಗಿ ಶೋಧನ್, ಧರ್ಮಸ್ಥಳ ಮತ್ತು ಹರ‍್ಮೋನಿಯಂನಲ್ಲಿ ರವಿರಾಜ್, ಉಜಿರೆ ಸಹಕರಿಸಿದರು.


ಸಮವಸರಣ ಎಂದರೇನು: ಕೇವಲಜ್ಞಾನ ಪಡೆದ ಬಳಿಕ ತೀರ್ಥಂಕರರು ತಮ್ಮ ದಿವ್ಯಧ್ವನಿಯಿಂದ ಧರ್ಮೋಪದೇಶ ನೀಡುವ ಸಭೆಗೆ ಸಮವಸರಣ ಎನ್ನುತ್ತಾರೆ. ಇಲ್ಲಿ ಸಕಲ ಜೀವಿಗಳಿಗೂ ಅವರವರ ಭಾಷೆಯಲ್ಲಿ ಧರ್ಮೋಪದೇಶ ಕೇಳುವ ಅವಕಾಶವಿದೆ.
ಸಮವಸರಣದಲ್ಲಿ ದೇವತೆಗಳೆ ಬೇರೆ ಬೇರೆ ರೂಪವನ್ನು ಪಡೆದು ಭಗವಂತನ ಮಹಿಮೆಯನ್ನು ತಿಳಿಸುತ್ತಾರೆ. ಆಚಾರ್ಯ ಮಾನತುಂಗ ವಿರಚಿತ ಭಕ್ತಾಮರಸ್ತೋತ್ರದಲ್ಲಿ ಅಷ್ಟ ಮಹಾಪ್ರಾತಿಹರ‍್ಯದ ಶ್ಲೋಕಗಳಲ್ಲಿ ವರ್ಣಿಸಲಾಗಿದೆ ಎಂದು ಮೂಡಬಿದ್ರೆಯ ಜೈನ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮುನಿರಾಜ ರೆಂಜಾಳ ಹೇಳಿದರು. ಅಶೋಕವೃಕ್ಷ, ಸುರಪುಷ್ಪವೃಷ್ಟಿ, ದಿವ್ಯಧ್ವನಿ, ಚಾಮರ, ಸಿಂಹಾಸನ, ಪ್ರಭಾವಳಿ, ದೇವದುಂದುಭಿ, ಮುಕ್ಕೊಡೆ – ಇವು ಅಷ್ಟ ಮಹಾಪ್ರಾತಿಹರ‍್ಯಗಳು. ಹೇಮಾವತಿ ವೀ. ಹೆಗ್ಗಡೆಯವರ ಪರಿಕಲ್ಪನೆಯಲ್ಲಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಾಂಸ್ಕೃತಿಕ ಕಲಾಕೇಂದ್ರದ ವಿದ್ಯಾರ್ಥಿಗಳು ಆಕರ್ಷಕ ನೃತ್ಯ ಪ್ರದರ್ಶನದ ಮೂಲಕ ಸಾದರಪಡಿಸಿದರು.


ಚೈತ್ರ, ಅರುಣ್ ಮತ್ತು ಸುನಿಲ್ ನೃತ್ಯ ನಿರ್ದೇಶನ ನೀಡಿದರು. ಅನಿತಾಸುರೇಂಧ್ರ ಕುಮಾರ್, ಶ್ರದ್ಧಾಅಮಿತ್, ಪ್ರಿಯದರ್ಶಿನಿ, ರಜತಾ ಮತ್ತು ಬಾಹುಬಲಿ ಸೇವಾ ಸಮಿತಿಯ ಸದಸ್ಯರು ಅಷ್ಟವಿಧಾರ್ಚನೆ ಪೂಜೆಯಲ್ಲಿ ಭಾಗವಹಿಸಿದರು. ಶಾಂತಿಮAತ್ರ ಪಠಣ ಮತ್ತು ಮಹಾಮಂಗಳಾರತಿಯೊಂದಿಗೆ ಸಮವಸರಣ ಪೂಜೆ ಸಮಾಪನಗೊಂಡಿತು.
ಪಾಕತಜ್ಞರಾದ ಪಾಂಡಿರಾಜ ಕೊಕ್ರಾಡಿ ಮತ್ತು ಬಾಹುಬಲಿ, ಪಿಲ್ಯ ಅವರನ್ನು ಗೌರವಿಸಲಾಯಿತು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಸುರೇಂದ್ರ ಕುಮಾರ್ ಮತ್ತು ಕುಟುಂಬಸ್ಥರು ಉಪಸ್ಥಿತರಿದ್ದರು.
ಮಹಾವೀರ್ ಜೈನ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲ ರಚನೆ

Suddi Udaya

ಉಜಿರೆ: ಎಸ್.ಡಿ.ಎಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ “ಸ್ಫೂರ್ತಿದಾಯಕ ವ್ಯಕ್ತಿತ್ವ” ಕಾರ್ಯಕ್ರಮ

Suddi Udaya

ಕುಂಟಿನಿ ದ.ಕ ಜಿ.ಪಂ.ಕಿ.ಪ್ರಾ ಶಾಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya
error: Content is protected !!