30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

ಬೆಳ್ತಂಗಡಿ : ತಾಲೂಕಿನಲ್ಲಿ ಕೊಂಚ ಕಡಿಮೆಯಾಗಿದ್ದ ಕಾಡಾನೆ ಕಾಟ ಮತ್ತೆ ಆರಂಭವಾಗಿದೆ.
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಮಾಕಳ ರಾಮಣ್ಣ ಗೌಡ ಎಂಬವರ ತೋಟಕ್ಕೆ ಶುಕ್ರವಾರ ತಡರಾತ್ರಿ ದಾಳಿ ಇಟ್ಟ ಕಾಡಾನೆಗಳು 50 ಬಾಳೆಗಿಡ, ಎರಡು ತೆಂಗಿನ ಮರ, ಅಡಕೆ ಮರಗಳನ್ನು ಧ್ವಂಸಗೊಳಿಸಿವೆ. ಮನೆಯಿಂದ ಅನತಿ ದೂರದ ಅಂಗಳದಲ್ಲಿ ಒಣಗಲು ಹಾಕಿದ ಅಡಕೆಗೆ ಆನೆಗಳು ತುಳಿದಿದ್ದು ನಷ್ಟ ಉಂಟಾಗಿದೆ.
ಗುಂಪಿನಲ್ಲಿ ಎರಡು ಆನೆಗಳಿದ್ದು ಒಂದು ಸಣ್ಣ ಆನೆ ಹಾಗೂ ಇನ್ನೊಂದು ದೊಡ್ಡ ಆನೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಪರಿಸರದಲ್ಲಿ ತಿರುಗಾಟ ನಡೆಸುವ ಮೂರು ಆನೆಗಳ ಹಿಂಡಿನಿಂದ ಒಂದು ಆನೆ ಬೇರ್ಪಟ್ಟಿರುವ ಶಂಕೆ ವ್ಯಕ್ತವಾಗಿದೆ.ಈ ಗುಂಪಿನಲ್ಲಿ ಇರುವ ಮರಿಯಾನೆ ಕಳೆದ ನಾಲ್ಕು ವರ್ಷಗಳ ಹಿಂದೆ ಕಡಿರುದ್ಯಾವರದ ತೋಟವೊಂದರಲ್ಲಿ ಗುಂಪಿನಿಂದ ಬೇರ್ಪಟ್ಟು ಬಾಕಿಯಾಗಿದ್ದು,ಬಳಿಕ ಅದನ್ನು ಅರಣ್ಯ ಇಲಾಖೆ ಕಾಡಿಗೆ ಬಿಟ್ಟಿತ್ತು‌, ಈಗ ಈ ಮರಿಯಾನೆ ಹೆಚ್ಚಿನ ಬೆಳವಣಿಗೆ ಹೊಂದಿರುವ ಕುರಿತು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.


ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ :

ಕಾಡಾನೆಗಳು ಕಂಡು ಬಂದ ಪ್ರದೇಶದಿಂದ 3 ಕಿ.ಮೀ ದೂರದಲ್ಲಿರುವ ತೋಟತ್ತಾಡಿ ಗ್ರಾಮದ ಕುಂಟಾಡಿ ಎಂಬಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ನಡೆದಿದೆ. ವಿಜು ಅವರ ಮನೆಯಲ್ಲಿ ಒಟ್ಟು ಮೂರು ಸಾಕು ನಾಯಿಗಳಿದ್ದು ಚಿರತೆ ಒಂದು ನಾಯಿಯ ಮೇಲೆ ದಾಳಿ ನಡೆಸಿದಾಗ ಉಳಿದ ಎರಡು ನಾಯಿಗಳು ಚಿರತೆಯ ಮೇಲೆ ದಾಳಿ ಮಾಡಿದ್ದು ಈ ಸಮಯ ಚಿರತೆ ಸ್ಥಳದಿಂದ ಓಡಿಹೋಗಿದೆ. ಚಿರತೆ ದಾಳಿಗೆ ತುತ್ತಾದ ನಾಯಿ ಜೀವನ್ಮರಣ ಪರಿಸ್ಥಿತಿಯಲ್ಲಿದೆ. ಸ್ಥಳಕ್ಕೆ ಡಿ ಆರ್ ಎಫ್ ಓ ಭವಾನಿ ಶಂಕರ್, ಸಿಬ್ಬಂದಿಗಳು ಭೇಟಿ ನೀಡಿದ್ದು,ಚಿರತೆ ಸೆರೆಗೆ ಬೋನು ಇರಿಸಲು ಕ್ರಮ ಕೈಗೊಂಡಿದ್ದಾರೆ.

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಸ್ವ ಸಹಾಯ ಸಂಘಗಳಿಗೆ ಸಾಲ ವಿತರಣಾ ಕಾರ್ಯಕ್ರಮ – ಜನಸುರಕ್ಷಾ ಯೋಜನೆಗಳ ಸಂಪೂರ್ಣತಾ ಅಭಿಯಾನ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya

ಉಜಿರೆ: ಮಹಾಮಳೆಗೆ ಎಸ್.ಡಿ.ಎಂ ಆಸ್ಪತ್ರೆಯ ಸಮೀಪ ಕಂಪೌಂಡ್ ಕುಸಿತ: ಸ್ಕೂಟಿ, ಬೈಕ್ ಜಖಂ: ಬೀಳುವ ಹಂತದಲ್ಲಿದೆ ವಾಸದ ಮನೆ

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya
error: Content is protected !!