September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ಅಮೃತ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಕೊಕ್ಕಡ: ಕೆನರಾ ಬ್ಯಾಂಕ್ ಕೊಕ್ಕಡ ಹಾಗೂ ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಡಿ.16 ರಂದು ಕೊಕ್ಕಡ ಗ್ರಾ.ಪಂ. ಅಂಬೇಡ್ಕರ್ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿ ಮಾತನಾಡಿ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಬೇಬಿ ವಹಿಸಿದರು.

ಕಾರ್ಯಕ್ರಮದಲ್ಲಿ ಆರ್ಥಿಕ ಸಾಕ್ಷರತ ಸಂಯೋಜಕಿ ಉಷಾ ರವರು ವಿವಿಧ ಸೌಲಭ್ಯಗಳ ಹಾಗೂ ಯೋಜನೆಗಳ ಅನುಷ್ಠಾನ ದ ಬಗ್ಗೆ ವಿಸ್ಕೃತ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಮಂಗಳೂರು ಕೆನರಾ ಬ್ಯಾಂಕ್ ಕವಿತಾ ಶೆಟ್ಟಿ, ಕೆನರಾ ಬ್ಯಾಂಕ್ ಎಜಿ.ಎಂ. ನರೇಂದ್ರ ರೆಡ್ಡಿ, ಕೊಕ್ಕಡ ಕೆನರಾ ಬ್ಯಾಂಕ್ ನ ಮ್ಯಾನೇಜರ್ ಅಂಕಿತ್ ಸಿಂಗ್, ಸೌತಡ್ಕ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾವ್, ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಕೊಕ್ಕಡ ಗ್ರಾ.ಪಂ ಕಾರ್ಯದರ್ಶಿ ಭಾರತಿ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಕೃಷ್ಣಪ್ಪ ಪೂಜಾರಿ, ಮೋನಪ್ಪ ದೇವಸ್ಯ, ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ ಶಿಶಿಲ ಉಪಸ್ಥಿತರಿದ್ದರು.

ಶ್ರೀಮತಿ ಸಾವಿತ್ರಿ ಪ್ರಾರ್ಥಿಸಿ, ಕೊಕ್ಕಡ ಗ್ರಾ.ಪಂ. ನಿಕಟಪೂರ್ವ ಉಪಾಧ್ಯಕ್ಷೆ ಪವಿತ್ರ ಸ್ವಾಗತಿಸಿದರು. ಕೊಕ್ಕಡ ಗ್ರಾ.ಪಂ. ನಿಕಟಪೂರ್ವಾಧ್ಯಕ್ಷ ಯೋಗೀಶ್ ಆಲಂಬಿಲ ಕಾರ್ಯಕ್ರಮ ನಿರೂಪಿಸಿದರು.

Related posts

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ. ಸಿ.ಸಿ ಬ್ಯಾಂಕಿನಿಂದ ಸಾಧನಾ ಶ್ರೇಷ್ಟ್ರ ಪ್ರಶಸ್ತಿ

Suddi Udaya

ಕೊಕ್ಕಡ ವಿಶ್ವ ಹಿ೦ದೂ ಪರಿಷದ್‌ ಹಾಗೂ ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ತಮಿಳುನಾಡು ಚುನಾವಣೆ ಕರ್ತವ್ಯಕ್ಕೆ ತೆರಳಿದ ಬೆಳ್ತಂಗಡಿ ಘಟಕದ ಗೃಹರಕ್ಷಕರು

Suddi Udaya

ಕಲ್ಲೇರಿ ಅಂಗನವಾಡಿ ಕೇಂದ್ರಕ್ಕೆ ಬದಲಿ ವ್ಯವಸ್ಥೆ- ಮತ್ತೆ ಕಾರ್ಯಾರಂಭಗೊಂಡ ಅಂಗನವಾಡಿ ಕೇಂದ್ರ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ’ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!