22.8 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ, ಅಶಕ್ತ ಕುಟುಂಬಕ್ಕೆ ಆರ್ಥಿಕ ನೆರವು,ಮನೆ ಹಸ್ತಾಂತರ

ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಘಟಕದ ಪದಪ್ರದಾನ ಸಮಾರಂಭವು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಭಾಭವನದಲ್ಲಿ ನಡೆಯಿತು.

ಪದಪ್ರದಾನ ಸಮಾರಂಭವನ್ನು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ಉದ್ಘಾಟಿಸಿ ಶುಭಕೋರಿದರು.ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ‌ ಅಧ್ಯಕ್ಷ ರಾಜೇಶ್ ಬಿ ಅವರು ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಅಶ್ವಥ್ ಕುಮಾರ ರ ,ಕಾರ್ಯದರ್ಶಿ ಸುನೀಲ್ ಕುಮಾರ್ ಕನ್ಯಾಡಿ ಇವರು ಯುವವಾಹಿನಿ ಘಟಕದ ನೂತನ ಅಧ್ಯಕ್ಷ ಸದಾಶಿವ ಪೂಜಾರಿ ಊರ ಹಾಗೂ ತಂಡಕ್ಕೆ ಅಧಿಕಾರ ಹಸ್ತಾಂತರಿಸಿ ಶುಭಕೋರಿದರು.ಯುವ ಸಾಹಿತಿ ಚಂದ್ರಹಾಸ ಬಳಂಜ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿ ನಿಯೋಜಿತ ಅಧ್ಯಕ್ಷ ಹರೀಶ್ ಕೆ ಪೂಜಾರಿ ಬೈಲಬರಿ,ಕಾರ್ಯದರ್ಶಿ ಯಶೋಧರ್ ಮುಂಡಾಜೆ ಉಪಸ್ಥಿತರಿದ್ದರು.

ಕಾರ್ಯದರ್ಶಿ ಸುನೀಲ್ ಕನ್ಯಾಡಿ ತಮ್ಮ ಅವಧಿಯಲ್ಲಿ ಮಾಡಿದ ಸೇವಾ ಕಾರ್ಯಗಳ ವಿವರವನ್ನು ವೇದಿಕೆಯ ಮುಂದಿಟ್ಟರು.ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರಾದ ಸಿಎ ನಿರೀಕ್ಷಾ ಎನ್ ನಾವರ,ಕ್ರೀಡಾ ಸಾಧಕ ಶುಶಾಂತ್ ಎಸ್ ಪೂಜಾರಿ ಅವರನ್ನು ಗೌರವಿಸಲಾಯಿತು. ಸುಂದರ ಪೂಜಾರಿ, ಗಿರಿಜಾ, ಪ್ರದ್ವಿರಾಣಿ ಇವರಿಗೆ ಸಾಂತ್ವನ ನಿಧಿ ಹಸ್ತಾಂತರಿಸಲಾಯಿತು. ಆಸರೆಗೊಂದು ಸೂರು ಯೋಜನೆಯಡಿ ಶ್ರೀಮತಿ ಗುಲಾಬಿ ಒಡಿಲ್ನಾಳ ಅವರ ಮನೆಯನ್ನು ದುರಸ್ತಿಗೊಳಿಸಿ ಅವರಿಗೆ ಹಸ್ತಾಂತರಿಸಲಾಯಿತು.

Related posts

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಮೋಹನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಆಯ್ಕೆ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

Suddi Udaya

ಬಂದಾರಿನಲ್ಲಿ ಮತ್ತೆ ತೋಟಕ್ಕೆ ನುಗ್ಗಿದ್ದ ಕಾಡಾನೆ: ಕೃಷಿ ಹಾನಿ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕರ್ತರಿಗೆ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಗ್ರಂಥಾಲಯ ವಿಭಾಗದ ವತಿಯಿಂದ ಓದುವ ಸಪ್ತಾಹ

Suddi Udaya
error: Content is protected !!