24.7 C
ಪುತ್ತೂರು, ಬೆಳ್ತಂಗಡಿ
May 25, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

ಬೆಳ್ತಂಗಡಿ: ತಾಲೂಕಿನ ಬಂದಾರು ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಗಳು ಓಡಿಶಾ ರಾಜ್ಯದ ಭುವನೇಶ್ವರ್ ನಲ್ಲಿ ಡಿ.22 ರಿಂದ ಡಿ.26 ರವರೆಗೆ ನಡೆಯುವ 67 ನೇ ರಾಷ್ಟ್ರಮಟ್ಟದ 14 ವರ್ಷ ವಯೋಮಿತಿಯ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದು, ಈ ವಿದ್ಯಾರ್ಥಿಗಳನ್ನು ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕರಾದ ಮೋಹನ್ ಕುಮಾರ್ ಡಿ.18 ರಂದು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರಿಗೆ ಹುಗುಚ್ಚ ನೀಡಿ ಶುಭಹಾರೈಸಿದರು.ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ನ ” ಕನಸು” ಎಂಬ ಕಾರ್ಯಕ್ರಮದ ಅಡಿಯಲ್ಲಿ ಈ ವಿದ್ಯಾರ್ಥಿಗಳನ್ನು ದತ್ತು ಪಡೆದುಕೊಂಡಿರುತ್ತದೆ‌.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲ ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ “ನಮ್ಮೂರು ಕನ್ನಡ ಶಾಲೆ ನಮ್ಮ ಹೆಮ್ಮೆ” ಕಾರ್ಯಕ್ರಮದ ಅಡಿಯಲ್ಲಿ ಡಿ.18 ರಂದು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಸಂಚಾಲಕರಾದ ಮೋಹನ್ ಕುಮಾರ್ ರವರು ಶಾಲೆಗೆ ಭೇಟಿ ನೀಡಿದರು. ಈ ವೇಳೆ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿಗಳನ್ನು ನೀಡಿದ್ದಾರೆ.

Related posts

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚಾರಣೆ

Suddi Udaya

ಸುದ್ದಿ ಉದಯ ವಾರಪತ್ರಿಕೆ ಲೋಕಾರ್ಪಣೆ ನೂತನ ಕಚೇರಿಯ ಉದ್ಘಾಟನೆ
ಯೂಟ್ಯೂಬ್ ಮತ್ತು ವೆಬ್‌ಸೈಟ್‌ಗೆ ಚಾಲನೆ

Suddi Udaya

ಲಾಯಿಲ: ಸ್ವಾತಂತ್ರ ವೀರ ಭಗತ್ ಸಿಂಗ್ ಇವರ 116 ನೇ ಜನುಮ ದಿನಾಚರಣೆ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya
error: Content is protected !!