April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಧರ್ಮಸ್ಥಳ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರ ಕರ್ತರ ಸಂಘದ ವತಿಯಿಂದ ಅಡ್ಯಾರ್ ಸಹ್ಯಾದ್ರಿ ಕ್ರೀಡಾಂಗಣದಲ್ಲಿ ಜ.5 ರಿಂದ ನಡೆಯಲಿರುವ ಕ್ಯಾ.ಪ್ರಾಂಜಲ್ ಗೌರವಾರ್ಥ ‘ಕೆಯುಡಬ್ಲ್ಯುಜೆ ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ ಕ್ರಿಕೆಟ್’ ಪಂದ್ಯಾವಳಿಯ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ,’ ರಾಜ್ಯ ಸಭಾ ಸದಸ್ಯ, ಡಾ. ಡಿ. ವೀರೇಂದ್ರ ಹೆಗ್ಗಡೆ ಡಿ.18ರಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.

ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯ ದರ್ಶಿ ವೀರು ಶೆಟ್ಟಿ ,ದ.ಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ,ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು,ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ,ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್,ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟ,ಹಿರಿಯ ಪತ್ರಕರ್ತರಾದ ಕೇಶವ ಕುಂದರ್, ಆರ್.ಎನ್. ಪೂವಣಿ,ಝಿ ಕನ್ನಡ ಡ್ರಾಮ ಜ್ಯೂನಿಯರ್ ಖ್ಯಾತಿಯ ರಿಷಿಕಾ ಕುಂದೇಶ್ವರ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ

Suddi Udaya

ಕಾಂಗ್ರೆಸ್ ನಾಯಕರು ಆಯೋಜಿಸಿದ್ದ ಗಣೇಶೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಮುಖ್ಯ ಅತಿಥಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ಬ್ಯಾನರ್

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya

ಹಿಪ್ ಬಾಯ್ಸ್ ಡಾನ್ಸ್ ಕ್ರೀವ್ ಉಜಿರೆ ವಿದ್ಯಾರ್ಥಿಗಳ ಸ್ವಾಗತ ಮತ್ತು ಡಾನ್ಸ್ ಸ್ಪರ್ಧೆ-ಡಾನ್ಸ್ ಬ್ಯಾಟಲ್-2024 ಕಾರ್ಯಕ್ರಮ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ

Suddi Udaya
error: Content is protected !!