September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಡಿ.19: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ (ನಿ.) ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ

ತಣ್ಣೀರುಪಂತ: ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಕಲ್ಲೇರಿ, ಇದರ ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ ಡಿ. 19 ರಂದು ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ.
ಉದ್ಘಾಟನೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಸಹಕಾರ ರತ್ನ ಬಾವಂತಬೆಟ್ಟು ನಿರಂಜನ್ ನೆರವೇರಿಸಲಿದ್ದಾರೆ.
ಅಧ್ಯಕ್ಷತೆಯನ್ನು ರೈತ ಉತ್ಪಾದಕರ ಕಂಪೆನಿ ನಿ. ಕಲ್ಲೇರಿ ನವಚೇತನಾ ತೋಟಗಾರಿಕೆಯ ಅಧ್ಯಕ್ಷ ಲಿಂಗಪ್ಪ ನಾಯ್ಕ ವಹಿಸಲಿದ್ದಾರೆ.


ಮುಖ್ಯ ಅತಿಥಿಗಳಾಗಿ ತಣ್ಣೀರುಪಂಥ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಹೇಮಾವತಿ, ದ.ಕ. ಜಿಲ್ಲೆ ಮಂಗಳೂರಿನ ಜಂಟಿ ಕೃಷಿ ನಿರ್ದೇಶಕ ಎಚ್.ಕೆಂಪೇಗೌಡ, ಪುತ್ತೂರು ಉಪವಿಭಾಗದ ಉಪಕೃಷಿ ನಿರ್ದೇಶಕ ಶಿವಶಂಕರ್ ಎಚ್. ದಾನೆಗೂಂಡರ್, ಕೆ.ವಿ.ಕೆ. ಮಂಗಳೂರಿನ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ| ಟಿ.ಜೆ. ರಮೇಶ, ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಕುಮಾರ್ ಟಿ.ಎಮ್., ಬೆಳ್ತಂಗಡಿ ಜಿಲ್ಲಾ ಪಂಚಾಯತ್ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಕೆ.ಎಸ್. ಚಂದ್ರಶೇಖರ ಭಾಗವಹಿಸಲಿದ್ದಾರೆ ಎಂದು ಅಧ್ಯಕ್ಷ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷ ಪುರಂದರ ಗೌಡ ಎನ್.ಕೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಶೆಟ್ಟಿ ಮತ್ತು ಆಡಳಿತ ಮಂಡಳಿ, ಸದಸ್ಯರು ಮತ್ತು ಸಿಬ್ಬಂದಿವರ್ಗದವರು ತಿಳಿಸಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ

Suddi Udaya

ಗುರುವಾಯನಕೆರೆ: ವಿದ್ವತ್ ಪ.ಪೂ. ಕಾಲೇಜಿನಲ್ಲಿ ಚಾರ್ಟರ್ಡ್ ಅಕೌಂಟೆಂಟ್ಸ್ ಡೇ ಆಚರಣೆ

Suddi Udaya

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya

ಕೇಳ್ಕರ, ಕಲ್ಲಮೆ – ಮುಂಡೂರು ಕೆಸರುಮಯ; ರಸ್ತೆ ಸಂಚಾರಕ್ಕೆ ಅಡ್ಡಿ

Suddi Udaya

ಉಜಿರೆ: ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆ

Suddi Udaya

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!