23.3 C
ಪುತ್ತೂರು, ಬೆಳ್ತಂಗಡಿ
May 18, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ


ವೇಣೂರು: ನಿಗದಿತವಾಗಿ ಕಾಲಕಾಲಕ್ಕೆ ಹೃದಯದ ತಪಾಸಣೆ ನಡೆಸಿ ಸಕಾಲಿಕ ಚಿಕಿತ್ಸೆ ನೀಡಿದಾಗ ಪ್ರಾಣಾಪಾಯದಿಂದ ಪಾರಾಗಬಹುದು ಎಂದು ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಯ ಹೃದ್ರೋಗತಜ್ಞ ಡಾ. ಪದ್ಮನಾಭ ಕಾಮತ್ ಹೇಳಿದರು.

ಅವರು ಡಿ.17 ರಂದು ವೇಣೂರಿನಲ್ಲಿ ಭರತೇಶ ಸಮುದಾಯ ಭವನದಲ್ಲಿ ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಜನಮಂಗಲ ಕಾರ್ಯಕ್ರಮದಡಿ ಆಯೋಜಿಸಿದ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.


ಗ್ರಾಮೀಣ ಪ್ರದೇಶದ ಜನರು ಮಂಗಳೂರಿಗೆ ಬರಲು ವಾಹನದ ಸಮಸ್ಯೆ, ಮಾಹಿತಿಯ ಕೊರತೆ ಮೊದಲಾದ ಅನೇಕ ಸಮಸ್ಯೆಗಳಿರುತ್ತವೆ. ಆದರೂ, ವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಗತಿಯ ಆಧುನಿಕ ಯುಗದಲ್ಲಿ  ಸಕಾಲಿಕ ಚಿಕಿತ್ಸೆ ಲಭಿಸದೆ ತೊಂದರೆ ಆಗಬಾರದು ಎಂದು ಕೆ.ಎಂ.ಸಿ. ಆಸ್ಪತ್ರೆ ಅನೇಕ ಸೇವಾ ಯೋಜನೆಗಳನ್ನು ರೂಪಿಸಿದೆ. ಎಲ್ಲರೂ ಇದರ ಸದುಪಯೋಗ  ಪಡೆಯಬೇಕೆಂದು ಅವರು ಸಲಹೆ ನೀಡಿದರು.


ತನ್ನ ತಂದೆ ನಾರಾವಿ ಸರ್ಕಾರಿ ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿ ಹಲವು ವರ್ಷಗಳಲ್ಲಿ ಸೇವೆ ಸಲ್ಲಿಸಿರುವುದರಿಂದ ವೇಣೂರು ಪರಿಸರದ ಜನರೆಲ್ಲ ತಮ್ಮ ಕುಟುಂಬದವರಿಗೆ ಆಪ್ತರೂ, ಆತ್ಮೀಯರೂ ಆಗಿದ್ದಾರೆ ಎಂದು ಧನ್ಯತೆಯಿಂದ ಸ್ಮರಿಸಿದರು.
ವೇಣೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನೇಮಯ್ಯ ಕುಲಾಲ್, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಮತ್ತು ಕೆ.ಎಂ.ಸಿ. ಆಸ್ಪತ್ರೆಯ ಡಾ. ದೀಪಕ್ ಮಡಿ ಹಾಗೂ ಡಾ. ಆನಂದ ಹೆಗ್ಡೆ ಶುಭಾಶಂಸನೆ ಮಾಡಿದರು.
ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿದರು.
ಡಾ. ಶೌರ್ಯ ಬೆನರ್ಜಿ, ಡಾ. ದಿತೇಶ್, ಎಂ. ಡಾ. ಪ್ರಣೀತಾ, ಡಾ. ಶಂಕರನ್ ನಂಬೂದಿರಿ ಉಪಸ್ಥಿತರಿದ್ದರು.
ಡಾ. ಜಗದೀಶ ಚೌಟ, ಡಾ. ಶಾಂತಿಪ್ರಸಾದ್, ಡಾ. ಪೌಸ್ಟಿಲ್ ಅಜಿಲ ಮತ್ತು ಡಾ. ಆಶೀರ್ವಾದ್, ಎಂ.ಪಿ. ಶಿಬಿರದ ಆಯೋಜನೆಯಲ್ಲಿ ಸಹಕರಿಸಿದರು.
ಮಸ್ತಕಾಭಿಷೇಕ ಸಮಿತಿಯ ಪ್ರಧಾನಕಾರ್ಯದರ್ಶಿ ಪ್ರವೀಣ್‌ಕುಮಾರ್ ಇಂದ್ರ ಸ್ವಾಗತಿಸಿದರು. ಮಹಾವೀರ್ ಜೈನ್ ಮೂಡುಕೋಡಿಗುತ್ತು ಧನ್ಯವಾದವಿತ್ತರು.

Related posts

ಬಂದಾರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಸೇವಾ ಟ್ರಸ್ಟ್ ಮತ್ತು ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಪೆಲತ್ತಿಮಾರು ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ, ಭಜನೆ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಶ್ರೀ ಲಕ್ಷ್ಮಿ ಸಂಜೀವಿನಿ ಒಕ್ಕೂಟದ ಮಹಿಳೆಯರಿಂದ ತೋಡಿನ ಹೂಳೆತ್ತುವ ಕಾರ್ಯ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಇದರ ನೇತೃತ್ವ ರೂ. 6 ಕೋಟಿ ವೆಚ್ಚದ ನೂತನವಾಗಿ ನಿರ್ಮಿಸಲಾದ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಹಾಗೂ ವಾಣಿ ವಿದ್ಯಾಸಂಸ್ಥೆಗಳ ನೂತನ ಕಟ್ಟಡ ಎ.20 ರಂದು ಶೃಂಗೇರಿ ಮಠದ ಶ್ರೀಮಜ್ಜದ್ಗುರು ಶ್ರೀ ವಿಧುಶೇಖರಭಾರತೀ ಸ್ವಾಮೀಜಿಯವರಿಂದ ಲೋಕಾರ್ಪಣೆ

Suddi Udaya

ಎಸ್. ಎಸ್. ಎಫ್ ಇಂಡಿಯಾ ರಾಷ್ಟ್ರಮಟ್ಟದ ಸಾಹಿತ್ಯೋತ್ಸವ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿ ಸೈಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Suddi Udaya

ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ಸಂಭ್ರಮದ ಈದ್ ದಿನಾಚರಣೆ

Suddi Udaya

ಕೊಕ್ಕಡ: ಮಾಯಿಲಕೋಟೆ ದೈವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!