September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

ಶಿಬಾಜೆ: ಬ್ಯಾಂಕ್‌ ಆಪ್ ಬರೋಡಾ ಶಿಶಿಲ ಮತ್ತು ಶಿಬಾಜೆ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಡಿ.16 ರಂದು ಶಿಬಾಜೆ ಗ್ರಾಮ ಪಂಚಾಯತಿಯ ಪೆರ್ಲದ ಸಭಾಭವನದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶಿಶಿಲ ಬ್ಯಾಂಕ್‌ ಆಪ್ ಬರೋಡದ ಪ್ರಬಂದಕರಾದ ರಾಕೇಶ್ ರವರು ಉದ್ಘಾಟಿಸಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಉಪಾಧ್ಯಕ್ಷರಾದ ದಿನಕರ್ ಕುರುಪ್ ವಹಿಸಿ ಮಾತನಾಡಿ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಆರ್ಥಿಕ ಸಾಕ್ಷರತ ಸಂಯೋಜಕಿ ಉಷಾ ನಾಯ್ ರವರು ಮತ್ತು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ರವರು ವಿವಿಧ ಸೌಲಭ್ಯಗಳ ಹಾಗೂ ಯೋಜನೆಗಳ ಅನುಷ್ಠಾನದ ಬಗ್ಗೆ ವಿಸ್ಕೃತ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕೊರಗಪ್ಪ ನಾಯ್ಕ, ಗ್ರಾ.ಪಂ ಉಪಾಧ್ಯಕ್ಷ ದಿನಕರ್ ಕುರುಪ್, ಪಂಚಾಯತ್ ನ ನಿಕಟಪೂರ್ವ ಉಪಾಧ್ಯಕ್ಷ ವಿನಯ ಚಂದ್ರ.ಟಿ, ಸದಸ್ಯರಾದ ವನಿತಾ ವಿ ಶೆಟ್ಟಿಗಾ‌ರ್, ಅರಸಿನಮಕ್ಕಿ ಸರಕಾರಿ ಆಸ್ಪತ್ರೆ ನರ್ಸ್ ಲಲಿತಾ ಉಪಸ್ಥಿತರಿದ್ದರು.
ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಮಹೇಶ್ ಶೆಟ್ಟಿಗಾ‌ರ್, ಸ್ವಾಗತವನ್ನು ದಿನಕ‌ರ್ ಕುರುಪ್, ಧನ್ಯವಾದವನ್ನು ವನಿತಾ ವಿ ಶೆಟ್ಟಿಗಾ‌ರ್ ನೆರವೇರಿಸಿದರು.

Related posts

ಜ.27: ಮಡಂತ್ಯಾರು ಗ್ರಾಮ ಪಂಚಾಯತ್ ನಲ್ಲಿ ವಿವಿಧ ರಸ್ತೆ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಪ.ಜಾತಿ / ಪ.ಪಂಗಡ ಮತ್ತು ದಿವ್ಯಾಂಗಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ ವಿತರಣೆ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಅಯೋಧ್ಯೆ ಶ್ರೀರಾಮ ಲಲ್ಲಾನ ಪ್ರಾಣ ಪ್ರತಿಷ್ಠೆ: ಬಂದಾರು ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ರಾಮತಾರಕ ಮಂತ್ರ ಜಪ, ಭಜನೆ

Suddi Udaya

25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ

Suddi Udaya

ಶ್ರೀರಾಮನಿಗೆ ಅವಹೇಳನ: ಪ್ರೊ. ಕೆ. ಎಸ್. ಭಗವಾನ್ ಬಂಧನಕ್ಕೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿಯಿಂದ ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!