April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವ ಮಹಾ ಅನ್ನದಾನದ ಕೂಪನ್ ಬಿಡುಗಡೆ

ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ದುರ್ಗಾ ದೇವಿ ದೇವಸ್ಥಾನದಲ್ಲಿ ಮರದ ಮುಹೂರ್ತ ಮತ್ತು ಬ್ರಹ್ಮಕಲಶೋತ್ಸವದ ಮಹಾ ಅನ್ನದಾನದ ಕೂಪನ್ ಬಿಡುಗಡೆ ಕಾರ್ಯಕ್ರಮವು ಡಿ.19ರಂದು ಜರುಗಿತು.

ಮಾಜಿ ಶಾಸಕ ವಸಂತ ಬಂಗೇರ ಕೂಪನ್ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಧನಂಜಯ ರಾವ್, ಪ್ರಧಾನ ಕಾರ್ಯದರ್ಶಿ ದಾಸಪ್ಪ ಗೌಡ ಕಾಂಜಾನು, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷರುಗಳಾದ ವಾಸುದೇವ ರಾವ್ ಕಕ್ಕೆನೇಜಿ ಹಾಗೂ ಮಂಜುನಾಥ್ ಕಾಮತ್, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ದಿನೇಶ್ ಗೌಡ ದಿಡುಪೆ, ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಆಡಳಿತಾಧಿಕಾರಿ ಮೋಹನ್ ಬಂಗೇರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಬ್ರಹ್ಮಕಲಶೋತ್ಸವ ಪದಾಧಿಕಾರಿಗಳು, ಊರ-ಪರವೂರ ಭಕ್ತಾಧಿಗಳು ಉಪಸ್ಥಿತರಿದ್ದರು. ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಘಟನಾ ಕಾರ್ಯದರ್ಶಿ ವಿನಯಚಂದ್ರ ಸೇನರಬೆಟ್ಟು ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಧನಂಜಯ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Related posts

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಮಡಂತ್ಯಾರು ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ವಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಧನಸಹಾಯ

Suddi Udaya

ಹೊಕ್ಕಾಡಿಗೋಳಿ: ಮಹಿಷಮರ್ಧಿನಿ ಕಂಬಳ ಸಮಿತಿ ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ ಪೂರ್ವಾಭಾವಿ ಸಭೆ

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಅರಸಿನಮಕ್ಕಿ: ಪಡ್ಡಾಯಿಬೆಟ್ಟು ನಿವಾಸಿ ನಿವೃತ್ತ ಶಿಕ್ಷಕ ತಿರುಮಲೇಶ್ವರ ಭಟ್ ಹೃದಯಾಘಾತದಿಂದ ನಿಧನ

Suddi Udaya

ಜು.15: ಧರ್ಮಸ್ಥಳದಲ್ಲಿ ಆತಿಥ್ಯ ವೆಜ್ ಹೊಟೇಲ್ ಶುಭಾರಂಭ

Suddi Udaya
error: Content is protected !!