ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಸೂಚನೆ: ಇ-ಕೆವೈಸಿ ಮಾಡಲು ಡಿ.31 ಕೊನೆಯ ದಿನ

Suddi Udaya

ಬೆಳ್ತಂಗಡಿ: ಕೇಂದ್ರ ಸರ್ಕಾರ ಅಡುಗೆ ಅನಿಲ ಸಂಪರ್ಕ ಹೊಂದಿರುವ ಗ್ರಾಹಕರಿಗೆ ಮಹತ್ವದ ಸೂಚನೆ ನೀಡಿದ್ದು, ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಡಿಸೆಂಬರ್‌ 31ರೊಳಗೆ ಇ-ಕೆವೈಸಿ (E-Kyc)ಮಾಡಿಸುವುದು ಕಡ್ಡಾಯಗೊಳಿಸಲಾಗಿದೆ.

ಎಲ್‌ಪಿಜಿ ಸಬ್ಸಿಡಿ ಪಡೆಯಲು ಪ್ರತಿಯೊಬ್ಬರೂ ಇ-ಕೆವೈಸಿ ಮಾಡಿಸಲು ಕೇಂದ್ರ ಸೂಚನೆ ನೀಡಿದ್ದು, ಇ-ಕೆವೈಸಿ ಮಾಡದಿದ್ದರೆ ಸಬ್ಸಿಡಿಯನ್ನು ರದ್ದುಗೊಳಿಸುವ ಎಚ್ಚರಿಕೆ ನೀಡಿದೆ. ಹೀಗಾಗಿ, ಎಲ್‌ಪಿಜಿ ಸಂಪರ್ಕ ಹೊಂದಿರುವ ಎಲ್ಲ ಫಲಾನುಭವಿಗಳು ಈ ವರ್ಷದ ಡಿಸೆಂಬರ್ 31ರೊಳಗೆ ಗ್ಯಾಸ್ ಸಂಪರ್ಕ ಇದ್ದವರು ತಮ್ಮ ಆಧಾರ್ ಕಾರ್ಡ್ ಬ್ಯಾಂಕ್ ಪಾಸ್ ಪುಸ್ತಕ ಮತ್ತು ಗ್ಯಾಸ್ ಏಜೆನ್ಸಿ ನೀಡಿದ ಪುಸ್ತಕವನ್ನು ತಮ್ಮ ಗ್ಯಾಸ್ ನೀಡುವ ಎಜೆನ್ಸಿ ಬಳಿ ಹೋಗಿ ಇ-ಕೆವೈಸಿ ಮಾಡಿಸತಕ್ಕದ್ದು. ಇ-ಕೆವೈಸಿ ಮಾಡಲು ಗ್ರಾಹಕರು ಬಳಸುತ್ತಿರುವ ಗ್ಯಾಸ್ ಸಿಲಿಂಡರ್ ಏಜೆನ್ಸಿಯನ್ನು ಸಂಪರ್ಕಿಸಬೇಕಾಗುತ್ತದೆ. ಇಲ್ಲದೇ ಹೋದರೆ, ಗ್ರಾಹಕರಿಗೆ ಲಭ್ಯವಿರುವ ಸಬ್ಸಿಡಿ ಮರುಪಾವತಿಯನ್ನು ಸಂಪೂರ್ಣವಾಗಿ ನಿಲ್ಲಿಸಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Leave a Comment

error: Content is protected !!