32.6 C
ಪುತ್ತೂರು, ಬೆಳ್ತಂಗಡಿ
November 24, 2024
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.27: ನಾವೂರುನಲ್ಲಿ 40ನೇ ವರ್ಷದ ಅಯ್ಯಪ್ಪ ದೀಪೋತ್ಸವ: ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ – ಪಂದಳರಾಜ ಶಶಿಕುಮಾರ ವರ್ಮ ನಾವೂರುಗೆ

ಬೆಳ್ತಂಗಡಿ : ಶ್ರೀ ಅಯ್ಯಪ್ಪ ಸೇವಾ ಸಮಿತಿ ನಾವೂರು ಇದರ 40ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ ಹಾಗೂ ಶಬರಿಮಲ ಅಯ್ಯಪ್ಪ ಸೇವಾ ಸಮಾಜಂ ದ.ಕ ಜಿಲ್ಲೆ ಇವರಿಂದ ‘ಹರಿವರಾಸನಂ’ ಗೀತೆಯ ಶತಾಬ್ದಿ ಕಾರ್ಯಕ್ರಮ ಡಿ.27ರಂದು ನಾವೂರು ಶ್ರೀ ಗುರುಕೃಪಾ ಭಜನಾ ಮಂದಿರದ ವಠಾರದಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರ ಶಬರಿಮಲೆಯ ಪಂದಳರಾಜ ಶಶಿಕುಮಾರ ವರ್ಮ ಹಾಗೂ ಅವರ ಧರ್ಮಪತ್ನಿ ಆಗಮಿಸಲಿದ್ದಾರೆ ಎಂದು
ಶ್ರೀ ಅಯ್ಯಪ್ಪ ಸೇವಾ ಸಮಿತಿ ನಾವೂರಿನ ಅಧ್ಯಕ್ಷ ಡಾ. ಪ್ರದೀಪ್ ಆಟಿಕುಕ್ಕೆ ಹೇಳಿದರು.


ಅವರು ಡಿ.19 ರಂದು ಬೆಳ್ತಂಗಡಿ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾರ್ವಜನಿಕರಿಗೆ ಹಾಗೂ ಶಾಲಾ ಮಕ್ಕಳಿಗೆ ಭಗವದ್ಗೀತೆ ಮತ್ತು ವಿಷ್ಣುಸಹಸ್ರನಾಮ ಪಾಠ-ಪಠಣವನ್ನು ನಡೆಸಲಾಗುತ್ತಿದ್ದು, ದೇವಸ್ಥಾನ ಮತ್ತು ಶ್ರೀ ಗುರುಕೃಪಾ ಭಜನಾ ಮಂದಿರದಲ್ಲಿರುವ ಶ್ರೀ ಅಯ್ಯಪ್ಪ ಸೇವಾ ಸಮಿತಿಗೆ ಅವಿನಾಭವ ಸಂಬಂಧ ಇದೆ. ಸುಮಾರು 40 ವರ್ಷಗಳ ಇತಿಹಾಸ ಇರುವ ಶ್ರೀ ಅಯ್ಯಪ್ಪ ಸೆವಾ ಸಮಿತಿಯಲ್ಲಿ ಪ್ರತಿ ವರ್ಷವೂ ಸುಮಾರು 50 ಕ್ಕಿಂತಲೂ ಹೆಚ್ಚು ಅಯ್ಯಪ್ಪ ವೃತಧಾರಿಗಳು ಮಾಲೆ ಧರಿಸಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡುತ್ತಿದ್ದಾರೆ ಎಂದರು.


ನಾವೂರಿನ ಸೇಸಪ್ಪ ಮೂಲ್ಯ ಗುರುಸ್ವಾಮಿ ಇವರ 50 ನೇ ವರ್ಷದ ಮತ್ತು ಶ್ರೀಧರ ಗುಡಿಗಾರ ಗುರುಸ್ವಾಮಿಯವರ 18 ನೇ ವರ್ಷದ ಶಬರಿಮಲೆ ಯಾತ್ರೆಯನ್ನು ಮಾಡುತ್ತಿರುವುದು ನಮಗೆಲ್ಲ ಮತ್ತಷ್ಟು ಸಂತೋಷವಾಗುತ್ತಿದೆ. ಡಿ.27ರಂದು 40 ನೇ ವರ್ಷದ ಶ್ರೀ ಅಯ್ಯಪ್ಪ ದೀಪೋತ್ಸವ ಆಚರಿಸುವ ಸಂದರ್ಭದಲ್ಲಿ 1923ರಲ್ಲಿ ರಚನೆಯಾದ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ಪವಿತ್ರವಾದ ಭಕ್ತಿಗೀತೆಯಾದ “ಹರಿವರಾಸನಂ” ಗೀತೆಯ ಶತಾಬ್ದಿ ಆಚರಣೆಯನ್ನು ಶಬರಿಮಲ ಅಯ್ಯಪ್ಪ ಸೇವಾ ಸಮಾಜಂ ದ.ಕ ಜಿಲ್ಲೆ ಇವರ ಆಶ್ರಯದಲ್ಲಿ ನಾವೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪಂದಳ ರಾಜ ಶಶಿಕುಮಾರ ವರ್ಮ ಹಾಗೂ ಅವರ ಧರ್ಮಪತ್ನಿ ನಾವೂರು ಗ್ರಾಮಕ್ಕೆ, ಅದರಲ್ಲೂ ದ.ಕ ಜಿಲ್ಲೆಗೆ ಪ್ರಥಮ ಬಾರಿಗೆ ಆಗಮಿಸುತ್ತಿದ್ದಾರೆ. ಅಂದು ಸಂಜೆ 5.30ಕ್ಕೆ ಶ್ರೀ ಅರ್ಧನಾರೀಶ್ವರ ದೇವಸ್ಥಾನದಿಂದ ಭಜನೆಯ ಮೂಲಕ – ಪಾಲಶಕೊಂಬು ಮೆರವಣಿಗೆಯೊಂದಿಗೆ ಅವರಿಬ್ಬರನ್ನು ಭವ್ಯ ರಥದಲ್ಲಿ ಅಯ್ಯಪ್ಪ ದೀಪೋತ್ಸವಕ್ಕೆ ಬರಮಾಡುವ ಅದ್ಭುತ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ರಾತ್ರಿ ಗಂಟೆ 8 ರಿಂದ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ಅಧ್ಯಕ್ಷ ಡಾ| ಪ್ರದೀಪ್ ಎ. ಇವರ ಅಧ್ಯಕ್ಷತೆಯಲ್ಲಿ ನಡೆಯುವ ಧಾರ್ಮಿಕ ಸಭೆಯಲ್ಲಿ ವಜ್ರದೇಹಿ ಮಠ ಗುರುಪುರದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಆಶೀರ್ವಚನ ನೀಡಿಲಿದ್ದಾರೆ. ಪಂದಳ ರಾಜರಾಗಿರುವ ಶಶಿಕುಮಾರ ವರ್ಮ ಹಾಗೂ ಅವರ ಧರ್ಮಪತ್ನಿ ಶ್ರೀ ಕ್ಷೇತ್ರ ಶಬರಿಮಲೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಶಬರಿಮಲ ಅಯ್ಯಪ್ಪ ಸೇವಾ ಸಮಾಜಂ ದ.ಕ. ಜಿಲ್ಲೆಯ ಅಧ್ಯಕ್ಷ ಗಣೇಶ್ ಪೊದುವಾಳ್, ಶಾಸಕ ಹರೀಶ್ ಪೂಂಜ, ಎಂಎಲ್ಸಿಗಳಾದ ಹರೀಶ್ ಕುಮಾರ್, ಹಾಗೂ ಪ್ರತಾಪಸಿಂಹ ನಾಯಕ್, ಉದ್ಯಮಿ ಶಶಿಧರ ಬಿ. ಶೆಟ್ಟಿ ನವಶಕ್ತಿ ಬರೋಡ, ಪ್ರಾಂತ ಸಹ ಕಾರ‍್ಯವಾಹ ಪ್ರಕಾಶ್ ಪಿ,ಎಸ್, ಗ್ರಾ.ಪಂ. ಅಧ್ಯಕ್ಷೆ ಸುನಂದ, ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಅಧ್ಯಕ್ಷ ಹರೀಶ್ ಸಾಲಿಯನ್, ಸಿ ಎ ಬ್ಯಾಂಕ್ ಬಂಗಾಡಿ ನಿರ್ದೇಶಕ ಎ.ಬಿ. ಉಮೇಶ್ ಅತ್ಯಡ್ಕ ಭಾಗವಹಿಸುತ್ತಾರೆ ಎಂದರು.
ಶ್ರೀ ಅಯ್ಯಪ್ಪ ಸೇವಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಹರೀಶ್ ಕಾರಿಂಜ ಸ್ವಾಗತಿಸಿ, ವಂದಿಸಿದರು. ಪತ್ರಿಕಾಗೋಷ್ಠಿಯಲ್ಲಿ ಗುರುಸ್ವಾಮಿ ಶ್ರೀಧರ ಗುಡಿಗಾರ, ಕುಂಜಿರ ಗುರುಸ್ವಾಮಿ ಚಾರ್ಮಾಡಿ, ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನೆಲ್ಲಿಪಲ್ಕೆ, ಶ್ರೀ ಗೋಪಾಲಕೃಷ್ಣ ದೇವಸ್ಥಾನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಧರ್ಣಪ್ಪ ಮೂಲ್ಯ, ಗುರುಸ್ವಾಮಿ ಸೇಸಪ್ಪ ಮೂಲ್ಯ, ಉದಯ ಬಂಗೇರ ನಾವೂರು ಉಪಸ್ಥಿತರಿದ್ದರು.

Related posts

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

Suddi Udaya

ಪೋಟೋವನ್ನು ಆಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಆರೋಪ: ಮಹಿಳೆಯಿಂದ ಪೊಲೀಸ್ ದೂರು: ಆರೋಪಿ ಮೇಲೆ ಪ್ರಕರಣ ದಾಖಲು

Suddi Udaya

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳ ಸಭೆ

Suddi Udaya

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya
error: Content is protected !!