25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ: ನವಚೇತನಾ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನೂತನ ಕಟ್ಟಡದ ಉದ್ಘಾಟನೆ

ತಣ್ಣೀರುಪಂತ: ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪೆನಿ ನಿಯಮಿತ ಕಲ್ಲೇರಿ, ಇದರ ವಾರ್ಷಿಕ ಸಾಮಾನ್ಯ ಸಭೆ ಹಾಗೂ ನೂತನ ಕಟ್ಟಡದ ಉದ್ಘಾಟನೆ ಡಿ. 19 ರಂದು ತಣ್ಣೀರುಪಂತ ಸೇವಾ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಸಹಕಾರ ರತ್ನ ಬಾವಂತಬೆಟ್ಟು ನಿರಂಜನ್ ನೆರವೇರಿಸಿದರು.
ಅಧ್ಯಕ್ಷತೆಯನ್ನು ರೈತ ಉತ್ಪಾದಕರ ಕಂಪೆನಿ ನಿ. ಕಲ್ಲೇರಿ ನವಚೇತನಾ ತೋಟಗಾರಿಕೆಯ ಅಧ್ಯಕ್ಷ ಲಿಂಗಪ್ಪ ನಾಯ್ಕ ವಹಿಸಿದರು.

ಮುಖ್ಯ ಅತಿಥಿಗಳಾಗಿ ತಣ್ಣೀರುಪಂತ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಹೇಮಾವತಿ, ದ.ಕ. ಜಿಲ್ಲೆ ಮಂಗಳೂರಿನ ಜಂಟಿ ಕೃಷಿ ನಿರ್ದೇಶಕ ಎಚ್.ಕೆಂಪೇಗೌಡ, ಪುತ್ತೂರು ಉಪವಿಭಾಗದ ಉಪಕೃಷಿ ನಿರ್ದೇಶಕ ಶಿವಶಂಕರ್ ಎಚ್. ದಾನೆಗೂಂಡರ್, ಕೆ.ವಿ.ಕೆ. ಮಂಗಳೂರಿನ ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥ ಡಾ| ಟಿ.ಜೆ. ರಮೇಶ, ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಕುಮಾರ್ ಟಿ.ಎಮ್., ಬೆಳ್ತಂಗಡಿ ಜಿಲ್ಲಾ ಪಂಚಾಯತ್ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಕೆ.ಎಸ್. ಚಂದ್ರಶೇಖರ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷ ಪುರಂದರ ಗೌಡ ಎನ್.ಕೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾರಾಯಣ ಶೆಟ್ಟಿ ಮತ್ತು ಆಡಳಿತ ಮಂಡಳಿ, ಸದಸ್ಯರು ಮತ್ತು ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Related posts

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

Suddi Udaya

ಮುಂಬಯಿ ಅಜೆಕಾರು ಕಲಾಭಿಮಾನಿಗಳ ಬಳಗದಿಂದ ಯಕ್ಷಗಾನ ಪ್ರದರ್ಶನ: ಉಜಿರೆ ಮಾ| ಆದಿತ್ಯ ಹೊಳ್ಳ ರಿಗೆ ಸನ್ಮಾನ

Suddi Udaya

ಧರ್ಮಸ್ಥಳ : ನಡುಗುಡ್ಡೆ ನಿವಾಸಿ ಶೀನಪ್ಪ ಗೌಡ ನಿಧನ

Suddi Udaya

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya
error: Content is protected !!