27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

ಕಲ್ಮಂಜ: ಸರಕಾರಿ ಪ್ರೌಢಶಾಲೆ ಕಲ್ಮಂಜ ಇಲ್ಲಿಯ ಪ್ರತಿಭಾದಿನಾಚರಣೆ ಇತ್ತೀಚೆಗೆ ನಡೆಯಿತು.
ಹಿರಿಯ ವಿದ್ಯಾರ್ಥಿ ನವೀನ್ ಕುಮಾರ್ ಧ್ವಜಾರೋಹಣಗೈದು ಶುಭ ಹಾರೈಸಿದರು.
ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಾಲಾ ಮೇಲುಸ್ತುವಾರಿ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ ಶೆಟ್ಟಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಉಜಿರೆಯ ಶ್ರೀನಿಧಿ ಸ್ಟೋರ್ಸ್ ಮಾಲಕ ವಾಮನ ಬೆಂಡೆ ಭಾಗವಹಿಸಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.

ಸಂಸ್ಥೆಯ ಹಿರಿಯ ವಿದ್ಯಾರ್ಥಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಅಸಿಸ್ಟೆಂಟ್ ಮುಖ್ಯೋಪಾಧ್ಯಾಯರು ಅಶೋಕ್ ಕುಮಾರ್ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಯೋಗಾಸನದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಮೋಹಿತ್ ಮತ್ತು ವಿಭಾಗಮಟ್ಟದಲ್ಲಿ ವಿಜೇತರಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಚಿತ್ರಕಲೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿ ಶ್ರವಣ್ ನನ್ನು ಸನ್ಮಾನಿಸಲಾಯಿತು. ಸಂಸ್ಥೆಯಲ್ಲಿ ಹಲವು ವರ್ಷಗಳ ಕಾಲ ಮುಖ್ಯ ಅಡುಗೆಯವರಾಗಿ ಸೇವೆ ಸಲ್ಲಿಸಿ ಸ್ವಯಂ ನಿವೃತ್ತಿ ಹೊಂದಿದ ಅನಿತಾರವರನ್ನು ಸನ್ಮಾನಿಸಲಾಯಿತು. ಅಪರಾಹ್ನ ವಿದ್ಯಾರ್ಥಿಗಳಿಂದ ನೃತ್ಯ ನಾಟಕ ಯೋಗಾಸನ ಇತ್ಯಾದಿ ಸಾಂಸ್ಕೃತಿಕ ಕಾರ್ಯಗಳನ್ನು ನಡೆಸಲಾಯಿತು.
ಮಂಜುನಾಥ ಶೆಟ್ಟಿಯವರು ಅಧ್ಯಕ್ಷತೆ ವಹಿಸಿದ್ದ ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಸ್ವಾಗತಿಸಿ ಹೇಮಲತಾ ನಿರ್ವಹಿಸಿದರು. ಹಾಗೂ ಸವಿತಾ ಧನ್ಯವಾದತ್ತರು. ಶಿಕ್ಷಕಿಯರಾದ ಮಾಲಿನಿ ಹೆಗಡೆ ವರದಿ ವಾಚಿಸಿ ಪ್ರೇಮಲತಾ ಸನ್ಮಾನ ಕಾರ್ಯಕ್ರಮ ನಿರ್ವಹಿಸಿ ರಮ್ಯ ಹಾಗೂ ನೃತ್ಯಶ್ರಿ ಸಹಕರಿಸಿದರು.

ಈ ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಸದಸ್ಯರು ಹಾಗೂ ತಾಯಂದಿರ ಸಮಿತಿ ಸದಸ್ಯರು ಹಾಜರಿದ್ದು ಸಹಕರಿಸಿದರು.

Related posts

ಜಿಲ್ಲಾ ಮಟ್ಟದ ಕ್ಲೇ ಮಾಡೆಲಿಂಗ್ ಸ್ಪರ್ಧೆ : ಅಂಡಿಂಜೆ ಸ.ಉ. ಪ್ರಾ.ಶಾಲೆ ವಿದ್ಯಾರ್ಥಿ ಹಾಷಿಕ್ ಪ್ರಥಮ ಸ್ಥಾನ

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಫೆ.11 : ಬೆಳ್ತಂಗಡಿ ಧರ್ಮಪ್ರಾಂತ್ಯ ಸ್ಥಾಪನೆಯ ಬೆಳ್ಳಿ ಹಬ್ಬದ ಸಂಭ್ರಮ : 25 ಮನೆಗಳ ಕೀಲಿ ಕೈ ಹಸ್ತಾಂತರ ಹಾಗೂ ವಿದ್ಯಾನಿಧಿ ಕಾರ್ಯಕ್ರಮ

Suddi Udaya

ನಾರಾವಿ: ಶ್ರೀಮತಿ ಯಮುನಾ ಬಾಂದೋಟ್ಟು ನಿಧನ

Suddi Udaya

ಗುರಿಪಳ್ಳ ನಿವಾಸಿ ಉಮೇಶ್ ಆಚಾರ್ಯರವರ ಶಸ್ತ್ರ ಚಿಕಿತ್ಸೆಯ ಆರ್ಥಿಕ ನೆರವಿಗಾಗಿ ಮನವಿ

Suddi Udaya
error: Content is protected !!