April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

ಲಾಯಿಲ ಗ್ರಾಮ ಪಂಚಾಯತ್ ನ ಭಾರತ್ ಮಾತಾ ಸಭಾಭವದಲ್ಲಿ 2023-24 ನೇ ಸಾಲಿನ ಮಕ್ಕಳ ಗ್ರಾಮ ಸಭೆಯನ್ನು ಡಿ.19 ರಂದು ನಡೆಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ಎಂ.ಕೆ ವಹಿಸಿಕೊಂಡರು ಹಾಗೂ NRLM ನ ತಾಲೂಕು ಸಂಯೋಜಕರಾದ ವಿನೋದ್ ಪ್ರಸಾದ್ ರವರು ಮಕ್ಕಳ ಹಕ್ಕುಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಸಭೆಯಲ್ಲಿ ಉಪಾಧ್ಯಕ್ಷರಾದ ಸುಗಂಧಿ ಜಗನ್ನಾಥ ಕರ್ನೊಡಿ, ಶಾಲಾ ಮುಖ್ಯೋಪಾಧ್ಯಾಯರಾದ ಜಗನ್ನಾಥ ಹಾಗೂ ಪಡ್ಲಾಡಿ ಮುಖ್ಯೋಪಾಧ್ಯಾಯರಾದ ರಾಜೇಶ್ವರಿ, ಪಂಚಾಯತ್ ಸದಸ್ಯರಾದ ಜಯಂತಿ ಮಹೇಶ್ ಕೆ., ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀನಿವಾಸ ಡಿ.ಪಿ ಹಾಗೂ ಮಾಜಿ ಅಧ್ಯಕ್ಷರಾದ ರುಕ್ಮಯ್ಯ ಕನ್ನಾಜೆ ಮತ್ತು ಕುಂಟಿನಿ ಶಾಲಾ ನಾಯಕಿ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ಸದಸ್ಯರಾದ ಮಹೇಶ್ ಕೆ. ಮಕ್ಕಳ ಹಕ್ಕು, ಕರ್ತವ್ಯಗಳು ಹಾಗೂ ಜವಾಬ್ದಾರಿಗಳ ಬಗ್ಗೆ ಸವಿರವಾಗಿ ಸಭೆಗೆ ಮಾಹಿತಿ ನೀಡಿದರು. ಮಕ್ಕಳಿಗೆ ಶಾಲೆಯಲ್ಲಿ ನಡೆಸಿದ ವಿವಿಧ ಸ್ಪರ್ಧೆಗಳಿಗೆ ಬಹುಮಾನ ವಿತರಿಸಲಾಯಿತು ಮತ್ತು ಶಾಲಾ ಮಕ್ಕಳ ಬೇಡಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯ ನಿರೂಪಣೆಯನ್ನು ಪಂಚಾಯತ್ ಲೆಕ್ಕಾ ಸಹಾಯಕರಾದ ಸುಪ್ರಿತಾ ಎಸ್ ಶೆಟ್ಟಿ ನಡೆಸಿಕೊಟ್ಟರು.

Related posts

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya

ಬೆಳ್ತಂಗಡಿ ಕ್ಷೇತ್ರದ ವಿವಿಧೆಡೆ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಮತ ಯಾಚನೆ

Suddi Udaya

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪ್ರತಿಷ್ಠಾಷ್ಟಬಂಧ ಬಹ್ಮಕಲಶೋತ್ಸವ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್ ಅಕ್ಕಿ ಹೊರೆಕಾಣಿಕೆ ಸಮರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya
error: Content is protected !!