23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

ಬೆಳಾಲು: ಮಾಯ ಫ್ರೆಂಡ್ಸ್ ಮಾಯ ಬೆಳಾಲು ವತಿಯಿಂದ ಜರಗಿದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಮಟ್ಟದ ವಿದ್ಯಾರ್ಥಿಗಳಿಗಾಗಿ ಕಬಡ್ಡಿ ಪಂದ್ಯಾಟವು ಬೆಳಾಲಿನ ಮಾಯ ಶ್ರೀ ಮಹದೇವ ದೇವಸ್ಥಾನದ ಮೈದಾನದಲ್ಲಿ ನಡೆಯಿತು.

ಈ ಪಂದ್ಯಾಟದಲ್ಲಿ ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ಮಕ್ಕಳ ತಂಡವು ಪ್ರಥಮ ಸ್ಥಾನದೊಂದಿಗೆ ಸಮಗ್ರ ಪ್ರಶಸ್ತಿಯನ್ನು ತನ್ನದಾಗಿಸಿತು.

ಪ್ರಶಸ್ತಿಯನ್ನು ಮಾಜಿ ಸಚಿವರಾದ ಗಂಗಾಧರ ಗೌಡ, ಮಾಯ ಮಹದೇವ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರಾದ ಎಚ್ ಪದ್ಮ ಗೌಡ, ನಿವೃತ್ತ ಕೃಷಿ ಅಧಿಕಾರಿ ನಾರಾಯಣ ಸುವರ್ಣ, ಊರ ಗಣ್ಯರಾದ ದಾಮೋದರ ಗೌಡ ಸುರುಳಿ, ಸುರೇಂದ್ರ ಗೌಡ ಸುರುಳಿ, ಪಂಚಾಯತ್ತಿನ ಸದಸ್ಯರಾದ ದಿನೇಶ್ ಕೋಟ್ಯಾನ್, ಸದಸ್ಯರಾದ ಪ್ರವೀಣ್ ವಿಜಯ್ ಮೊದಲಾದ ಗಣ್ಯರಿಂದ ಪ್ರಶಸ್ತಿಯನ್ನು ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಚೊಕ್ಕಾಡಿ ಮತ್ತು ಕಬಡ್ಡಿ ತರಬೇತುದಾರರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರು ಉಪಸ್ಥಿತರಿದ್ದರು.

Related posts

ಸಿ.ಎ ಪರೀಕ್ಷೆ: ಕುಮ್ಮುಂಜ ನಿವಾಸಿ ಕೃಷ್ಣರಾಜ ತಂತ್ರಿ ಉತ್ತೀರ್ಣ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಅನಾರೋಗ್ಯದಿಂದ ಬಳಲುತ್ತಿರುವ ಚೈತ್ರೇಶ್ ಮೊಗ್ರು ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮಿ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಉಜಿರೆ ಮೋಹನ್ ಕುಮಾರ್ ರವರಿಗೆ ‘ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ- 2023’

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!