25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

ಉಜಿರೆ: ವಿಕಸಿತ ಭಾರತ ಸಂಕಲ್ಪ ಯಾತ್ರೆಯು ಡಿ.19 ರಂದು ಉಜಿರೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜಾನಪದ ಕ್ಷೇತ್ರದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ದೈವ ನರ್ತಕ ಹಾಗೂ ಸಿವಿಲ್ ಇಂಜಿನಿಯರ್ ಡಾಕ್ಟರ್ ರವೀಶ್ ಪಡುಮಲೆ ರವರಿಗೆ ಗ್ರಾಮ ಪಂಚಾಯತ್ ವತಿಯಿಂದ ಸನ್ಮಾನ ಮಾಡಿ ಗೌರವಿಸಲಾಯಿತು.

ತುಳುನಾಡಿನ ದೈವಾರಾಧನೆಯ ನರ್ತನ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಮೂಲ ಪದ್ದತಿಗೆ ಮೌಲ್ಯವನ್ನು ಕೊಟ್ಟು, ಅದನ್ನು ಉಳಿಸಿ ಬೆಳೆಸುತ್ತಾ ಬರುವ ರವೀಶ್ ರವರು ದೈವನರ್ತಕ ಸಮುದಾಯದಲ್ಲಿ ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಡಾಕ್ಟರೇಟ್ ಪಡೆದ ಮೊದಲ ದೈವನರ್ತಕರಾಗಿದ್ದಾರೆ. ಕೇಂದ್ರದ ಯೋಜನೆಗಳನ್ನು ಗ್ರಾಮ ಪಂಚಾಯತ್ ಮಟ್ಟದಲ್ಲಿ ಪರಿಚಯಿಸುವ ಸಲುವಾಗಿ ಆಯೋಜಿಸಿರುವ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಸಂದರ್ಭದಲ್ಲಿ ಸಮಾಜದಲ್ಲಿ ಗುರುತಿಸಿಕೊಂಡಿರುವ ಹಲವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಪಂಚಾಯತ್ ಅಧ್ಯಕ್ಷರಾದ ಉಷಾ ಕಾರಂತ್, ಪಂಚಾಯತ್ , ಸದಸ್ಯರುಗಳು ಮತ್ತು ಬೇರೆ ಬೇರೆ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

Related posts

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ದ.ಕ. ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ ಕೆ. ಜಯಕೀರ್ತಿ ಜೈನ್ ರಿಗೆ ಸನ್ಮಾನ

Suddi Udaya

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya
error: Content is protected !!