April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ : ಇಬ್ಬರು ಸರಕಳ್ಳಿಯರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಉದ್ಯೋಗಿಯೊಬ್ಬರು ಸರಕಾರಿ ಬಸ್ ಗೆ ಹತ್ತುವಾಗ ಕರಿಮಣಿ ಸರ ಕಳ್ಳತನ ಮಾಡಿದ ಪ್ರಕರಣವನ್ನು ಭೇದಿಸಿದ ಬೆಳ್ತಂಗಡಿ ಪೊಲೀಸರು ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಡಿ.20 ರಂದು ಇಬ್ಬರು ತಮಿಳುನಾಡು ರಾಜ್ಯದ ಕಳ್ಳಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸರಕಾರಿ ಉದ್ಯೋಗಿಯಾಗಿರುವ ವಾರಿಜಾ ಎಂಬವರು ಬೆಳ್ತಂಗಡಿ ಸರಕಾರಿ ಬಸ್ ಗೆ ಡಿ.12 ರಂದು ಸರಕಾರಿ ಬಸ್ ಹತ್ತುವ ವೇಳೆ 24 ಗ್ರಾಂ ಚಿನ್ನದ ಕರಿಮಣಿ ಸರವನ್ನು ಕಳ್ಳತನ ಮಾಡಲಾಗಿತ್ತು. ‌ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು ಅದರಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದರು.

ಈ ಪ್ರಕರಣ ತನಿಖೆ ನಡೆಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಮತ್ತು ತಂಡದ ಪೊಲೀಸರು ತಮಿಳುನಾಡು ರಾಜ್ಯದ ತಿರುಪುರ್ ಜಲ್ಲೆಯ ಮೋಹಿನಿ ಯಾನೆ ಮಾರಿಮುತ್ತು(35) ಮತ್ತು ದಿವ್ಯಾ ಯಾನೆ ಕಾಮಾಚಿ(30) ಇಬ್ಬರನ್ನು ಆರೋಪಿಗಳನ್ನು ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಡಿ.20 ರಂದು ಮಧ್ಯಾಹ್ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿದ ಕರಿಮಣಿ ಸರವನ್ನು ಆರೋಪಿಗಳ ಬಳಿಯಿಂದ ಪೊಲೀಸರಿಗೆ ನೀಡಿದ್ದಾರೆ. ಆರೋಪಿಗಳ ಮೇಲೆ ಈ ಹಿಂದೆ ಬೆಳ್ತಂಗಡಿ ಸೇರಿದಂತೆ ಹಲವು ಕಡೆ ಕಳ್ಳತನ ಪ್ರಕರಣ ದಾಖಲಾಗಿದ್ದು. ವಿಚಾರಣೆ ವೇಳೆ ಮುಲ್ಕಿ ಮತ್ತು ಬೆಳ್ತಂಗಡಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ತಪ್ಪೋಪ್ಪಿಕೊಂಡಿದ್ದಾರೆ.

ಇಬ್ಬರು ಆರೋಪಿಗಳನ್ನು ಸಂಜೆ ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಿದ್ದು ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬೆಳ್ತಂಗಡಿ ಸರ್ಕಲ್‌‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದಲ್ಲಿ ಬೆಳ್ತಂಗಡಿ ಸಬ್ ಇನ್ಸ್ಪೆಕ್ಟರ್ ಚಂದ್ರಶೇಖರ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Related posts

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅಭಿವೃದ್ಧಿ ಹೆಸರಲ್ಲಿ ದೂಳು ತಿನ್ನಿಸಬೇಡಿ, ರಸ್ತೆ ಅಗಲೀಕರಣ ಜನಸ್ನೇಹಿಯಾಗಿರಲಿ, ರಸ್ತೆ ಬೇಕು ದೂಳು ಬೇಡ ನಾಮಫಲಕ ಅಳವಡಿಕೆ:

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳ್ತಂಗಡಿ: ನಾಟಿ ವೈದ್ಯ ಬಾಬು ಆಚಾರ್ಯ ರವರಿಗೆ ಸನ್ಮಾನ

Suddi Udaya

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya

ಬೆಳ್ತಂಗಡಿ ತಹಶೀಲ್ದಾರ ಯಾಗಿ ಸುರೇಶ್ ಕುಮಾರ್ ಟಿ ಎಸ್ ನೇಮಕ

Suddi Udaya
error: Content is protected !!