ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಬೆಳ್ತಂಗಡಿ : ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ವೇಣೂರು ಠಾಣಾ ಪೊಲೀಸರು ಡಿ.21 ರಂದು ಬಂಧಿಸಿದ್ದಾರೆ.

ವೇಣೂರು ಪೊಲೀಸ್ ಠಾಣೆಯಲ್ಲಿ 2016 ರಲ್ಲಿ ದಾಖಲಾದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನ್ಯ Addl Civil Judge & JMFC ಬೆಳ್ತಂಗಡಿ ನ್ಯಾಯಲಯದಲ್ಲಿ‌ ದಾಖಲಾದ ಸಿ.ಸಿ ನಂಬ್ರ 535/2016 ಮತ್ತು ಸಿ.ಸಿ ನಂಬ್ರ 871/2017 ರಲ್ಲಿ ಸುಮಾರು 6 ರಿಂದ 7 ವರ್ಷಗಳಿಂದ ತನ್ನ ಸ್ವಂತ ವಿಳಾಸದಲ್ಲಿ ವಾಸ ಮಾಡದೆ ವಿವಿಧ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯಾದ ಸುಳ್ಯ ತಾಲೂಕಿನ ಐವತ್ತೋಕ್ಲು ಗ್ರಾಮದ ಪಂಜದ,ನೆಲ್ಲಿಕಟ್ಟೆ ನಿವಾಸಿ ದಿ.ಆದಂ ಮಗನಾದ ಶರೀಫ್ ಯಾನೆ ಮಹಮ್ಮದ್ ಶರೀಫ್ (43) ಎಂಬಾತನನ್ನು ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನಿರ್ದೇಶನದಂತೆ ವೇಣೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಶ್ರೀ ಶೈಲಾ ಮತ್ತು ಸಬ್ ಇನ್ಸ್ಪೆಕ್ಟರ್ ಆನಂದ್ ಎಮ್ ನೇತೃತ್ವದ ಸಿಬ್ಬಂದಿ ಪ್ರವೀಣ್ ಎಂ ಮತ್ತು ಸಚಿನ್ ರವರು ಡಿ.21 ರಂದು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ವಿಟ್ಲದ ಸಾರಡ್ಕ ಎಂಬಲ್ಲಿ ವಶಕ್ಕೆ ಪಡೆದುಕೊಂಡು ನಂತರ ಬಂಧಿಸಿ ಮಾನ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Comment

error: Content is protected !!