April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬಂದಾರು : ಪೆರ್ಲ -ಬೈಪಾಡಿಯಲ್ಲಿ ನೂತನ ಶಾಖಾ ಅಂಚೆ ಕಚೇರಿ ಉದ್ಘಾಟನೆ

ಬಂದಾರು : ಗ್ರಾಮ ಪಂಚಾಯತ್ ಬಂದಾರು ಹಾಗೂ ಅಂಚೆ ಇಲಾಖೆ ಪುತ್ತೂರು ವಿಭಾಗ ಇದರ ಸಹಯೋಗದೊಂದಿಗೆ ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಬಸ್ ನಿಲ್ದಾಣದ ಬಳಿ ಪಂಚಾಯತ್ ಕಟ್ಟಡದಲ್ಲಿ ನೂತನ ಶಾಖಾ ಅಂಚೆ ಕಚೇರಿ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಪುತ್ತೂರು ವಿಭಾಗ ಸೀನಿಯರ್ ಸೂಪರಿಂಟೆಂಡೆಂಟ್ ಪೋಸ್ಟ್ ಆಫೀಸರ್ ನವೀನ್ ಚಂದರ್ ಇವರು ಕಚೇರಿ ಉದ್ಘಾಟನೆ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ತಮ್ಮ ದೇಣಿಗೆಯನ್ನು ಕಳೆಂಜ ನಂದಗೋಕುಲ ಗೋಶಾಲೆಯ ಸೇವಾಶ್ರಮಕ್ಕೆ ನೂತನ ಕಚೇರಿಯ ಮೊದಲ ಹಣ ವರ್ಗಾವಣೆ ಮಾಡುವ ಮೂಲಕ ಚಾಲನೆ ನೀಡಿದರು.

ತಮ್ಮ ನಿವೃತ್ತಿ ಜೀವನಕ್ಕೆ ಪಾದಾರ್ಪಣೆಗೊಳ್ಳಲಿರುವ ಪುತ್ತೂರು ವಿಭಾಗ ಸೀನಿಯರ್ ಸೂಪರಿಂಟೆಂಡೆಂಟ್ ಪೋಸ್ಟ್ ಆಫೀಸರ್ ನವೀನ್ ಚಂದರ್ ಹಾಗೂ ಸಹಕರಿಸಿದ ಶರ್ಮ, ದಿನೇಶ್ ಗೌಡ ಅಡ್ಡಾರು, ಇವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಕೊಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ದಯಾಮಣಿ, ಬಂದಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಬರಮೇಲು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ, ಚಂದ್ರ ನಾಯ್ಕ ಅಸಿಸ್ಟೆಂಟ್ ಸೂಪರಿಟೆಂಡೆಂಟ್ ಪೋಸ್ಟ್ ಆಫೀಸರ್ ಪುತ್ತೂರು ವಿಭಾಗ, ಮೋಹನ್ ಬಿ ಅಸಿಸ್ಟೆಂಟ್ ಸೂಪರಿಂಟೆಂಡೆಂಟ್ ಆಫೀಸರ್, ಕಾರ್ಕಳ ಉಪ ವಿಭಾಗ, ಸುಜಯ್ ಅಂಚೆ ನಿರೀಕ್ಷಿಕರು ಬೆಳ್ತಂಗಡಿ, ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಹಾಲಿ ಸದಸ್ಯರಾದ ಶ್ರೀಮತಿ ಪರಮೇಶ್ವರಿ ಕೆ ಗೌಡ, ಸದಸ್ಯರಾದ ಶ್ರೀಮತಿ ಭಾರತಿ ಕೊಡಿಯೇಲು, ಶ್ರೀಮತಿ ಅನಿತಾ ಕೆ, ಕುರುಡಂಗೆ, ಶ್ರೀಮತಿ ಸುಚಿತ್ರ ಮುರ್ತಾಜೆ, ಪೆರ್ಲ-ಬೈಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾದ ಉಮೇಶ್ ಗೌಡ ಅಂಗಡಿಮಜಲು, ಉಪಾಧ್ಯಕ್ಷೆ ಶ್ರೀಮತಿ ಯಮುನಾ ಯಾನೆ ಜ್ಯೋತಿ, ಸ್ಥಾಪಕಾಧ್ಯಕ್ಷರು ಹಾಲಿ ನಿರ್ದೇಶಕರಾದ ಬಾಲಕೃಷ್ಣ ಗೌಡ ಪಾಪುದಡ್ಕ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಮಹಾಬಲ ಗೌಡ ನಾಗಂದೋಡಿ ಉಪಸ್ಥಿತರಿದ್ದರು.

ಆಧಾರ್ ನೋಂದಣಿ, ತಿದ್ದುಪಡಿ, ಜನಸಂಪರ್ಕ ಅಭಿಯಾನ, ಅಂಚೆ ಇಲಾಖೆಯ ನೂತನ ಖಾತೆ ಹಾಗೂ ವಿವಿಧ ಸೌಲಭ್ಯದ ಮಾಹಿತಿ ಜೊತೆಗೆ ನೋಂದಣಿ ಕಾರ್ಯದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Related posts

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್ ಗೆ ಇಂದು ಚಾಲನೆ: ಸಾಂಸ್ಕೃತಿಕ ಮೆರುಗು, ಮೇಳಗಳ ಬೆರಗು : ಕಲಾಸಕ್ತರು, ರೈತರು, ಮಕ್ಕಳು, ಮಹಿಳೆಯರು, ಕುಶಲಕರ್ಮಿಗಳು ಸೇರಿದಂತೆ ಸರ್ವರನ್ನೂ ಸೆಳೆಯುತ್ತಿರುವ ‘ವಿದ್ಯಾಗಿರಿ’  

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಕಲ್ಲೇರಿಯಲ್ಲಿ ಸಂಘದ ಎರಡನೇ ಶಾಖೆ ಲೋಕಾರ್ಪಣೆ

Suddi Udaya

ಉಜಿರೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ 110ನೇ ಸಂಸ್ಥಾಪನಾ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಸುಬ್ರಹ್ಮಣ್ಯ ರಾವ್ ರವರಿಗೆ ಬೀಳ್ಕೂಡುಗೆ ಸಮಾರಂಭ

Suddi Udaya

ನಿಡ್ಲೆ: ಬರೆಂಗಾಯ ವಣಸಾಯದಲ್ಲಿ ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಹಾಗೂ ವನಭೋಜನ

Suddi Udaya
error: Content is protected !!