24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ


ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟುಇಲ್ಲಿ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಡಿ.20 ರಂದು ನಡೆಯಿತು.

ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀ ವನದುರ್ಗಪರಮೇಶ್ವರಿ ದೇವಸ್ಥಾನ ಮಿಯ್ಯಾರು ಇಲ್ಲಿನ ಆಡಳಿತ ಸಮಿತಿಯ ಅಧ್ಯಕ್ಷರಾದ ನಿತ್ಯಾನಂದ ಗೌಡರವರು ದೀಪ ಪ್ರಜ್ವಲನ ಮಾಡುವುದರ ಮೂಲಕ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆಯನ್ನು ನೀಡಿ ಮಾತನಾಡಿ ವಾರ್ಷಿಕ ಕ್ರೀಡಾಕೂಟ ಎನ್ನುವುದು ವಿದ್ಯಾರ್ಥಿಗಳಿಗೆ ಬಹಳ ಸಂತೋಷದ ವಿಷಯವಾಗಿದೆ. ಮಕ್ಕಳಲ್ಲಿ ಇರುವಂತಹ ಸೂಕ್ತ ಪ್ರತಿಭೆಯನ್ನು ಹೊರಹಾಕಲು ಇದೊಂದು ಉತ್ತಮ ವೇದಿಕೆಯಾಗಿದೆ. ಕ್ರೀಡೆಯಲ್ಲಿ ಸೋಲು ಗೆಲುವು ಎನ್ನುವುದು ಮುಖ್ಯವಲ್ಲ ವಿದ್ಯಾರ್ಥಿಗಳ ಭಾಗವಹಿಸುವಿಕೆ ಮುಖ್ಯ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕರಾದ ಶೀನಪ್ಪಗೌಡರವರು ವಹಿಸಿ ಮಾತನಾಡಿ ಈ ಒಂದು ವಾರ್ಷಿಕ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಗೆ ಮತ್ತು ವಿದ್ಯಾರ್ಥಿಗಳ ಪೋಷಕ ಬಂಧುಗಳಿಗೆ ಕೂಡ ಈ ಒಂದು ಕ್ರೀಡಾಕೂಟವನ್ನು ನಾವು ಹಮ್ಮಿಕೊಂಡಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಪೋಷಕ ಬಂಧುಗಳು ಕೂಡ ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡಾಕೂಟದ ಯಶಸ್ವಿಗೆ ಸಹಕರಿಸಿದ್ದೀರಿ ಎಂದು ತಿಳಿಸಿದರು.

ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಈ ದಿನದ ಕ್ರೀಡಾಕೂಟದ ತೀರ್ಪುಗಾರರಾದ ಉಜಿರೆ ನ್ಯಾಚುರೋಪತಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಧರ್ಮೇಂದ್ರ ಹಾಗೂ ಉಜಿರೆ ಸೆಕೆಂಡರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಪರಮೇಶ್ವರ ಉಪಸ್ಥಿತರಿದ್ದರು .

ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀಯುತ ಶೀನಪ್ಪಗೌಡ ರವರು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನು ನೀಡಿದರು, ಕಾರ್ಯಕ್ರಮವನ್ನು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿಯಾದ ಶ್ರೀಮತಿ ಶೀಲಾ ಎನ್ ರವರು ನಿರೂಪಿಸಿ, ಧನ್ಯವಾದ ಸಮರ್ಪಿಸಿದರು. ಶಾಲೆಯ ಎಲ್ಲ ಶಿಕ್ಷಕರು ಈ ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

Related posts

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya

ಮಿತ್ತಬಾಗಿಲು ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲ ಕೃಷ್ಣ ದೇವಸ್ಥಾನದ ಆವರಣ ತಡೆಗೋಡೆ ಕುಸಿತ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya
error: Content is protected !!