23.4 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

ಪಡಂಗಡಿ: ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನ ಪಡಂಗಡಿ ಇದರ ಬ್ರಹ್ಮಕಲಶೋತ್ಸವದ ಅಂಗವಾಗಿ ರೂ.2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನಾ ಕಾರ್‍ಯಕ್ರಮ ಡಿ.22 ರಂದು ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.

ದೇವಸ್ಥಾನದ ವಠಾರದಲ್ಲಿ ದೇವರ ಪುಷ್ಕರಣಿ, ನಾಗನ ಕಟ್ಟೆ, ಸಭಾಭವನ, ಅರ್ಚಕರ ಕೊಠಡಿಗೆ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ಕಾಶಿ ಶೆಟ್ಟಿ ನವಶಕ್ತಿ, ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ, ವಿಜಯ ಕುಮಾರ್ ಶೆಟ್ಟಿ ಮುಂಬೈ, ಸಂಪತ್ ಕುಮಾರ್ ಜೈನ್ ಪಡಂಗಡಿ, ಕಿರಾತ ಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗೋಪಾಲ ಶೆಟ್ಟಿ ಕೊರ್ಯಾರು, ಎಕ್ಸೆಲ್ ವಿದ್ಯಾಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ವೆಂಕಟ್ರಾಯಮಲ್ಯ ಶಿವಗಿರಿ, ಕರುಣಾಕರ ಭಂಡಾರಿ, ಸುಮಂತ್ ಕುಮಾರ್ ಜೈನ್, ಗಂಗಾಧರ ರಾವ್ ಕೇವುಡೇಲು, ಪ್ರಶಾಂತ್ ಪಡಂಗಡಿ, ಪ್ರವೀಣ್ ಕುಮಾರ್ ಜೈನ್ ಪಾಡ್ಯಾರು, ಸುಕೇಶ್ ಕುಮಾರ್ ಕಡಂಬು, ಕುವೆಟ್ಟು ಗ್ರಾ.ಪಂ. ಅಧ್ಯಕ್ಷೆ ಭಾರತಿ ಶೆಟ್ಟಿ ಗುರುವಾಯನಕೆರೆ, ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ಹಾಗೂ ಅರ್ಚಕರಾದ ರಾಘವೇಂದ್ರ ಭಟ್ ಮಠ ಮೊದಲಾದವರು ಉಪಸ್ಥಿತರಿದ್ದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಸ್ವಾಗತಿಸಿದರು.

Related posts

ಬೆಳ್ತಂಗಡಿ: ಕ್ಯಾನ್ಸರ್ ಲಿಂಫೋಮಾ ಖಾಯಿಲೆ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ: ಇನ್ನು ಕೆಲವೇ ದಿನಗಳು

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮಚ್ಚಿನ: ಶರಾಬು ಕುಡಿಯಲು ಕರೆದ ವಿಚಾರಕ್ಕೆ ಹಲ್ಲೆ, ಬೆದರಿಕೆ: ಪುಂಜಾಲಕಟ್ಟೆ ಠಾಣೆಯಲ್ಲಿ ಪರಸ್ಪರ ದೂರು, ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಗಮಕ ಕಲಾ ಪರಿಷತ್ ವತಿಯಿಂದ ಪ. ರಾಮಕೃಷ್ಣ ಶಾಸ್ತ್ರಿ ದಂಪತಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ