ಶಿಶಿಲ: ಬ್ಯಾಂಕ್ ಆಪ್ ಬರೋಡಾ ಶಿಶಿಲ ಮತ್ತು ಶಿಶಿಲ ಗ್ರಾಮ ಪಂಚಾಯತ್ ನ ಸಹಯೋಗದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಡಿ.22 ರಂದು ಶಿಶಿಲ ಗ್ರಾಮ ಪಂಚಾಯತಿಯ ಸಭಾಭವನದಲ್ಲಿ ನಡೆಯಿತು.
ಶಿಶಿಲ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಶ್ರೀನಿವಾಸ್ ಮೂಡೆತ್ತಾಯ ರವರು ಕಾರ್ಯಕ್ರಮ ಉದ್ಘಾಟಿಸಿದರು. ಶಿಶಿಲ ಪಂಚಾಯತ್ ಅಧ್ಯಕ್ಷ ಸುಧಿನ್ ಡಿ ಅಧ್ಯಕ್ಷತೆ ವಹಿಸಿದ್ದರು.
ಅಖಿಲ ಭಾರತ್ ವಿದ್ಯುತ್ ಪರಿಷತ್ ನಾಯಕ ಸುವಿತ್ ಶೆಟ್ಟಿ ಮತ್ತು ಕೊಕ್ಕಡ ಗ್ರಾ.ಪಂ. ನಿಕಟ ಪೂರ್ವ ಅಧ್ಯಕ್ಷ ಯೋಗೀಶ್ ಆಲಂಬಿಲ ಕೇಂದ್ರ ಸರಕಾರದ ಯೋಜನೆಗಳ ಬಗ್ಗೆ ಮತ್ತು ವಿವಿಧ ಸೌಲಭ್ಯಗಳ ಹಾಗೂ ಯೋಜನೆಗಳ ಅನುಷ್ಠಾನದ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಶಿಶಿಲ ಬ್ಯಾಂಕ್ ಆಪ್ ಬರೋಡದ ಪ್ರಬಂದಕರಾದ ರಾಕೇಶ್, ಶಿಶಿಲ ಪಂಚಾಯತ್ ನ ಉಪಾಧ್ಯಕ್ಷರಾದ ಯಶೋಧರ ಕೆ.ವಿ ಉಪಸ್ಥಿತರಿದ್ದರು.
ಸಭೆಯಲ್ಲಿ ಕೊಕ್ಕಡ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪ್ರಭಾಕರ್ ಗೌಡ, ಅರಸಿನಮಕ್ಕಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಎಂ.ಎಸ್, ಶಿಬಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ದಿನಕರ್ ಕುರುಪ್, ತಾ.ಪಂ ಮಾಜಿ ಸದಸ್ಯೆ ಚೇತನ ಚಂದ್ರಶೇಖರ್, ಪಂಚಾಯತ್ ಸದಸ್ಯರು, ಸಿಬ್ಬಂಧಿಗಳು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು,ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುಮಾ ಸಂಜಯ್ ಪ್ರಾರ್ಥಿಸಿದರು. ಕರುಣಾಕರ ಶಿಶಿಲ ಸ್ವಾಗತಿಸಿದರು. ಸುಂದರ ಕೆ., ಮತ್ತು ದಿನಕರ್ ಕುರುಪ್ ಕಾರ್ಯಕ್ರಮ ನಿರೂಪಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ ಧನ್ಯವಾದವಿತ್ತರು.