September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ಬಿಡುಗಡೆಗೊಳಿಸಿದ ಪೌರ ಕಾರ್ಮಿಕರು

ಬೆಳ್ತಂಗಡಿ: ಕಳೆದ 10 ವರ್ಷಗಳಿಂದ ಪವರ್ ಆನ್ ಸಂಸ್ಥೆಯು ಉದ್ಯಮದೊಂದಿಗೆ ಸಾಕಷ್ಟು ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡು ಎಲ್ಲರ ಮೆಚ್ಚುಗೆ ಗಳಿಸಿದೆ.

ಪೌರ ಕಾರ್ಮಿಕರು ಬರೀ ಸ್ವಚ್ಚತೆಗೆ ಮಾತ್ರ ಸೀಮಿತವಾಗದೆ ಅವರು ನಮ್ಮಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕೆಂಬ ಸದುದ್ದೇಶದಿಂದ ಸಂಸ್ಥೆಯ ಮಾಲಕ ಶೀತಲ್ ಜೈನ್ ಅವರು ಪವರ್ ಆನ್ ಸಂಸ್ಥೆಯ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಿ ಇತರರಿಗೆ ಮಾದರಿಯಾದರು.

ಬೆಳ್ತಂಗಡಿ ಪಟ್ಟಣ ಪಂಚಾಯತ್ ಪೌರ ಕಾರ್ಮಿಕರಾದ ಸುರೇಶ್, ಚಂದ್ರ ಬೋವಿ, ವಸಂತ, ಅಶೋಕ ಇವರು ಕ್ಯಾಲೆಂಡರ್ ಬಿಡುಗಡೆಗೊಳಿಸಿ ಶುಭ ಕೋರಿದರು.

ಸಂಸ್ಥೆಯ ಮಾಲಕ ಶೀತಲ್ ಜೈನ್ ಪೌರ ಕಾರ್ಮಿಕರಿಗೆ ಉಡುಗೊರೆ ನೀಡಿ ಗೌರವಿಸಿ, ಸ್ವಾಗತಿಸಿದರು. ಸಂಸ್ಥೆಯ ಪ್ರಮುಖರಾದ ಆಯಾನ್ಸ್ ಮೊಬೈಲ್ ಅರಿಹಂತ್ ಜೈನ್, ಸುಧೀರ್ ಜೈನ್ ಹಾಗೂ‌ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪೌರಕಾರ್ಮಿಕರು ನಗರದ ಜೀವನಾಡಿಗಳು:

ಪೌರಕಾರ್ಮಿಕರು ಸಮಾಜದ ಆರೋಗ್ಯ ಕಾಪಾಡುವ ವೈದ್ಯರಿದ್ದಂತೆ. ನಗರದ ಆರೋಗ್ಯ ಹಾಗೂ ಸ್ವಚ್ಛತೆ ಪೌರ ಕಾರ್ಮಿಕರ ಕೆಲಸದ ಮೇಲೆ ನಿಂತಿದೆ. ಹೀಗಾಗಿ ಪೌರಕಾರ್ಮಿಕರು ನಗರದ ಜೀವನಾಡಿಗಳು ಎಂದು ಪವರ್ ಆನ್ ಸಂಸ್ಥೆಯ ಮಾಲಕರಾದ ಶೀತಲ್ ಜೈನ್ ಹೇಳಿದರು.

Related posts

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ಆರೋಗ್ಯ ಅರಿವು ಮತ್ತು ಆಟಿದ ಕಮ್ಮೆನ ಕಾರ್ಯಕ್ರಮ

Suddi Udaya

ಕಲ್ಮಂಜ: 18ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವತಿಯಿಂದ ಶಾಸಕರಿಗೆ ಅಭಿನಂದನೆ

Suddi Udaya

ಫೆ.15 (ನಾಳೆ) ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಶಾಸಕ ಹರೀಶ್ ಪೂಂಜರವರ ವಿಶೇಷ ಪ್ರಯತ್ನದಲ್ಲಿ ರೂ.26 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ “ಅಕ್ಷಯ ಪಾಕಶಾಲೆ” ಲೋಕಾರ್ಪಣೆ

Suddi Udaya

ಮಾಚಾರು: ಕೋರ್ಯಾರು ನಿವಾಸಿ ಜಯಗೌಡ ನಿಧನ

Suddi Udaya
error: Content is protected !!