24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ)ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆಯನ್ನು ಬೆಳ್ತಂಗಡಿ ಸಾಂತೋಮ್ ಟವರ್ ನಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಫ್ಯಾಮಿಲಿ ಅಪೋಸ್ತಲೆಟ್ ನಿರ್ದೇಶಕ ವಂ. ಫಾ. ಥೋಮಸ್ ಪುಲ್ಲಾಟ್ ಆಗಮಿಸಿ, ಕೇಕ್ ಕಟ್ ಮಾಡಿ, ಪೌಷ್ಠಿಕ ಆಹಾರ ವಿತರಿಸಿ ಕ್ರಿಸ್ಮಸ್ ಸಂದೇಶ ನೀಡಿದರು.

ಪುಷ್ಪರಾಜ್ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕು. ಪ್ರಿಯಾ ಮತ್ತು ಅವರ ತಾಯಿ ಬೀನಾ, ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎಸ್.ಡಬ್ಲ್ಯೂ ವಿದ್ಯಾರ್ಥಿಗಳು, ಡಿ.ಕೆ .ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕಿ ಕು. ಶ್ರೇಯಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ವಂದನೀಯ ಫಾ. ಬಿನೋಯಿ ಎ.ಜೆ.ರವರು ಪ್ರಾಸ್ತಾವಿಕವಾಗಿ ಮಾತನಾಡಿ ಕ್ರಿಸ್ಮಸ್ ಸಂದೇಶ ನೀಡಿದರು. ಕು. ಶ್ರೇಯಾ ರವರು ಪ್ರಾರ್ಥನೆ ಹಾಡಿದರು. ಮಹಿಳಾ ಸಶಕ್ತತಾ ಕಾರ್ಯಕ್ರಮದ ಕಾರ್ಯಕರ್ತ ಮಾರ್ಕ್ ಡಿ ಸೋಜ ಸ್ವಾಗತಿಸಿ, ಡಿ.ಕೆ.ಆರ್.ಡಿ.ಎಸ್ ವಿದ್ಯಾನಿಧಿ ಯೋಜನೆಯ ಸಂಯೋಜಕ ಥೋಮಸ್ ರವರು ವಂದಿಸಿದರು.

ಸರಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಸಮಾಜ ಕಾರ್ಯದ ವಿದ್ಯಾರ್ಥಿಗಳು ಹಾಗೂ ಡಿ.ಕೆ.ಆರ್. ಡಿ ಎಸ್. ಸಿಬ್ಬಂದಿ ವರ್ಗದವರು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಸಂಜೀವಿನಿ ಸ್ವಸಹಾಯ ಸಂಘಗಳ ಮೇಲ್ವಿಚಾರಕ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸರಕಾರದಿಂದ ಸಮ್ಮತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

Suddi Udaya

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಆಗುಂಬೆ ವರ್ಗಾವಣೆ ಆದೇಶ ರದ್ದು: ಉಜಿರೆ ಗ್ರಾ.ಪಂ ಪಿಡಿಒ ಆಗಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ಮುಂದುವರಿಕೆ

Suddi Udaya
error: Content is protected !!