ಮಲವಂತಿಗೆ: ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಆಡಳಿತ ಸಮಿತಿ ಕಾಜೂರು ಅಧೀನದ ರಹ್ಮಾನಿಯಾ ಶಿಕ್ಷಣ ಸಂಸ್ಥೆ ಇದರ ರಹ್ಮಾನಿಯಾ ಪ್ರೌಢಶಾಲೆ ಮತ್ತು ಪಿಯು ಕಾಲೇಜಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಸಿದ್ಧರಾಗುವುದು ಹೇಗೆ? ಎಂಬುವುದರ ಕುರಿತು ವಿಶೇಷ ಕಾರ್ಯಾಗಾರ ಡಿ.22 ರಂದು ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಖ್ಯಾತ ತರಬೇತುದಾರ, ಶಿವಮೊಗ್ಗ ತೀರ್ಥಹಳ್ಳಿ ಸರಕಾರಿ ಕಾಲೇಜಿನ ಮನಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಇಕ್ಬಾಲ್ ಮಾಚಾರ್ ರವರು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ಮಾರ್ಗದರ್ಶನ ನೀಡಿದರು.
ಸಂಸ್ಥೆಯ ಅಕಾಡೆಮಿಕ್ ಡೈರೆಕ್ಟರ್ ಕೆ ಎಂ ಸಿದ್ದೀಕ್ ಮೋಂಟುಗೋಳಿ ಸ್ವಾಗತಿಸಿ, ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷರಾದ ಜನಾಬ್ ಕೆ ಯು ಇಬ್ರಾಹಿಂ, ಸಂಸ್ಥೆಯ ಚೇರ್ಮೇನ್ ಹಾಗೂ ದರ್ಗಾ ಸಮಿತಿ ಪ್ರಧಾನ ಕಾರ್ಯದರ್ಶಿ ಜೆ ಹೆಚ್ ಅಬೂಬಕ್ಕರ್ ಸಿದ್ದೀಕ್, ಸಂಸ್ಥೆ ಕೋಶಾಧಿಕಾರಿ ಮುಹಮ್ಮದ್ ಕಮಾಲ್, ಶಿಕ್ಷಣ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಮುಖ್ಯೋಪಾಧ್ಯಾಯಿನಿ ಸಂಶಾದ್ ಸಹಿತವಿರುವ ಶಿಕ್ಷಕರು ಉಪಸ್ಥಿತರಿದ್ದರು. ಸಹ ಶಿಕ್ಷಕರಾದ ಸ್ವಾದಿಕ್ ವಂದಿಸಿದರು.