September 6, 2026
ಆಯ್ಕೆಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾ ಆಯ್ಕೆ

ಬೆಳ್ತಂಗಡಿ : 2023-24 ಸಾಲಿನ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದ ಕ್ಯಾಲಿಕಟ್ ನಲ್ಲಿ ಡಿ.28 ರಂದು ನಡೆಯುತ್ತಿರುವ ಸೌತ್ ಜೋನ್ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಚಂದ್ರಿಕಾ (20)ರವರು ಆಯ್ಕೆಯಾಗಿದ್ದಾರೆ.

ಇವರು 2022-23 ಸಾಲಿನ ಕೇರಳ ಕೊಚ್ಚಿಯಲ್ಲಿ ನಡೆದ ಹ್ಯಾಂಡ್ಬಾಲ್ ಪಂದ್ಯಾಟದಲ್ಲಿ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಿ ಸೌತ್ ಜೋನ್ ಆಡಿದ್ದಾರೆ.

2022-23 ಸಾಲಿನ ಬೆಂಗಳೂರುನಲ್ಲಿ ನಡೆದ ಆಮೇಚೂರ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ. 2022-23ಸಾಲಿನ ಉಡುಪಿಯಲ್ಲಿ ನಡೆದ ಮಂಗಳೂರು ಯೂನಿವರ್ಸಿಟಿ ಗೇಮ್ ನಲ್ಲಿ 400 MTR hardals ನಲ್ಲಿ ದ್ವಿತೀಯ ಸ್ಥಾನ ಮತ್ತು 4.400 MTRನಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. 2022-23 ಸಾಲಿನಲ್ಲಿ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಾರೆ.

2023-24ಸಾಲಿನಲ್ಲಿ ನಡೆದ ಮಂಗಳೂರುನಲ್ಲಿ ನಡೆದ ರಾಜ್ಯ ಮಟ್ಟದ ಅಮೇಚುರ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಾರೆ 2023-24 ಸಾಲಿನಲ್ಲಿ ಮಂಗಳೂರಿನಲ್ಲಿ ನಡೆದ ಮಂಗಳೂರು ಯೂನಿವರ್ಸಿಟಿ ರೇಸಿಂಗ್ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

Related posts

ಗಸ್ತಿನಲ್ಲಿದ್ದ ಉರ್ವಾ ಠಾಣಾ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಬೈಕ್ ಸಹಸವಾರನಿಂದ ಹಲ್ಲೆ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಬೆಳ್ತಂಗಡಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

Suddi Udaya

ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಖ್ಯಾತ ಜ್ಯೋತಿಷಿ ರಾಜಗುರು ದ್ವಾರಕನಾಥ್ ದಂಪತಿ ಭೇಟಿ

Suddi Udaya
error: Content is protected !!