25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ: ಹಸಿರು ವಾಣಿ ಮತ್ತು ಪುಷ್ಪಗನ್ನಡಿ ಸಮರ್ಪಣೆ

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ಪರಿವಾರ ದೈವಗಳ ನರ್ತನ ಸೇವೆ ಡಿ.25 ಮತ್ತು 26ರಂದು ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಡಿ.25ರಂದು ಬೆಳಿಗ್ಗೆ ತಂತ್ರಿಗಳ ಸ್ವಾಗತ, ದೇವತಾ ಪ್ರಾರ್ಥನೆ, ಗಣಹೋಮ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಬೆಳಾಲು ಪೇಟೆಯಿಂದ ಮೆರವಣಿಗೆಯೊಂದಿಗೆ ಹಸಿರುವಾಣಿ ಸಮರ್ಪಣೆ, ನಡೆಯಿತು.

ಬಳಿಕ ಅನಂತಪದ್ಮನಾಭ ಮಹಿಳಾ ಕುಣಿತಾ ಭಜನಾ ತಂಡ ಮತ್ತು ಶ್ರೀ ಅನಂತೇಶ್ವರ ಭಜನಾ ಮಂಡಳಿಯಿಂದ ಭಜನೆ, ದೇವರಿಗೆ ಪಂಚಾಮೃತ ಅಭಿಷೇಕ, ಪವಮಾನ ಕಲಶಾಭಿಷೇಕ, ಪ್ರಸನ್ನ ಪೂಜೆ, ಶ್ರೀ ನಾಗ ದೇವರಿಗೆ – ಕಲಶಾಭಿಷೇಕ, ತನು ಸಮರ್ಪಣೆ, ಪರಿವಾರ ದೈವಗಳಿಗೆ ಕಲಶಾಭಿಷೇಕ, ಪರ್ವ ತಂಬಿಲ ಮಧ್ಯಾಹ್ನ ಮಹಾ ಪೂಜೆ, ಅನ್ನ ಸಂತರ್ಪಣೆ, ಊರವರಿಂದ ಶ್ರೀ ಮಹಾ ವಿಷ್ಣುಯಾಗ, ವಿಷ್ಣು. ಸಹಸ್ರ ನಾಮ ಪಾರಾಯಣ ರಾತ್ರಿ ಪೂಜೆ ಹಾಗೂ ಶ್ರೀ ದೇವರಿಗೆ ರಂಗ ಪೂಜೆ, ದೇವರ ಬಲಿ ಹೊರಟು ಭೂತಬಲಿ ಉತ್ಸವ, ವಸಂತಕಟ್ಟೆ ಪೂಜೆ, ಮಹಾಪೂಜೆ, ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ವಿಜಯ ಕುಮಾರ್ ಕೊಡಿಯಾಲ್‌ ಬೈಲ್ ನಿರ್ದೇಶನದಲ್ಲಿ ಶಿವದೂತೆ ಗುಳಿಗೆ ತುಳು ನಾಟಕ ಪ್ರದರ್ಶನಗೊಳ್ಳಲಿದೆ.

ದೇವಸ್ಥಾನದ ಆಡಳಿತ ಮೊಕ್ತಸರ ಜೀವಂದರ ಕುಮಾರ್ ಜೈನ್, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ ಗೌಡ, ಅಸ್ರಣ್ಣ ಗಿರೀಶ್ ಬಾರಿತ್ತಾಯ, ಜಾತ್ರಾ ಸಮಿತಿಯ ಪ್ರಧಾನ ಸಂಚಾಲಕ ದೇಜಪ ಗೌಡ ಅರಣೆಮಾರು ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷ ವಿದ್ಯಾ ಶ್ರೀನಿವಾಸ್ ಉಪಸ್ಥಿತರಿದ್ದರು.

Related posts

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹಿರಿಯ ಪತ್ರಕರ್ತ ವಿನಯ ಕುಮಾರ್ ಸೇಮಿತ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ತಾ.ಪಂ. ನ ಕಾರ್ಯನಿರ್ವಾಹಕಾಧಿಕಾರಿಯಾಗಿ ವೈಜಣ್ಣ ಕರ್ತವ್ಯಕ್ಕೆ ಹಾಜರು

Suddi Udaya
error: Content is protected !!