27.8 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ

ಇಂದಬೆಟ್ಟು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವು ಡಿ.23ರಂದು ನಡೆಯಿತು. ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಶಾಲಾ ವಾರ್ಷಿಕೋತ್ಸವದ ಧ್ವಜಾರೋಹಣ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಂಜೆ ಇಂದಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾಲತಾ ಗುಡಿಗಾರ್ ಇವರ ಅಧ್ಯಕ್ಷತೆಯೊಂದಿಗೆ ಸಭಾ ಕಾರ್ಯಕ್ರಮ ಜರುಗಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಆನಂದ ಅಡಿಲು, ಗ್ರಾಮ ಪಂಚಾಯತ್ ಸದಸ್ಯೆ ಜಯಂತಿ, ನವ ಭಾರತ್ ಗೆಳೆಯರ ಬಳಗದ ಗೌರವ ಅಧ್ಯಕ್ಷ ಅರುಣ್ ಕುಮಾರ್ ಕಲ್ಲಾಜೆ , ಅಶ್ವತ್ ರಾಜ್ ಕಲ್ಲಾಜೆ , ರಘು ಆಚಾರಿ, ಗಣೇಶ್ ಗೌಡ ಕಲ್ಲಾಜೆ, ರಮೇಶ್ ಕೆಂಗಾಜೆ, ವಾಮನ ಗೌಡ ಕೊಯಮ ಜಲು , ಸಿಎ ಬ್ಯಾಂಕ್ ನಿರ್ದೇಶಕರಾದ ಲಕ್ಷ್ಮಣ ಗೌಡ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಆರೋಗ್ಯ ಕ್ಲಿನಿಕ್ ವೈದ್ಯ ಡಾ| ಪ್ರದೀಪ್, ನಿವೃತ್ತ ಮುಖ್ಯ ಶಿಕ್ಷಕಿ ಚಿತ್ರ, ವಿಮುಕ್ತಿಯ ಮೇಲ್ವಿಚಾರಕಿ ಮೋಹಿನಿ, ಪ್ರಭಾರ ಮುಖ್ಯ ಶಿಕ್ಷಕಿ ದೀಪಾ ಹಾಗೂ ತಾಲೂಕು ಪ್ರಾಥಮಿಕ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ಎಚ್ .ಕೆ ಉಪಸ್ಥಿತರಿದ್ದರು.

ಕಜೆ ಮತ್ತು ಕಲ್ಲಾಜೆ ಅಂಗನವಾಡಿ ಪುಟಾಣಿಗಳಿಂದ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ಮತ್ತು ಶಾಲಾ ಮಕ್ಕಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ಜರಗಿತು. ಹಿರಿಯ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಹಿರಿಯ ವಿದ್ಯಾರ್ಥಿಗಳಿಂದ ಕಥೆ “ಏರ್ ಬರೆಪೆರ್” ಎಂಬ ನಾಟಕವು ಪ್ರದರ್ಶನಗೊಂಡಿತು. ಕಾರ್ಯಕ್ರಮದಲ್ಲಿ ಊರಿನ ಎಲ್ಲಾ ವಿದ್ಯಾಭಿಮಾನಿ ಬಂಧುಗಳು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ: ದೀಪಾವಳಿ ಪ್ರಯುಕ್ತ ದೀಪ ಸಂಜೀವಿನಿ, ಹಳ್ಳಿ ಸಂತೆ

Suddi Udaya

ತಾಲೂಕಿನಾದ್ಯಂತ ಸುರಿಯುತ್ತಿರುವ ಮಳೆಯ ಮುಂಜಾಗ್ರತಾ ಕ್ರಮವಾಗಿ ಶಾಸಕ ಹರೀಶ್ ಪೂಂಜರಿಂದ ಅಧಿಕಾರಿಗಳ ಸಭೆ

Suddi Udaya

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya
error: Content is protected !!