31.8 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ನಿಂದ ಅತ್ಯುತ್ತಮ ಗ್ರಾಮ ಪಂಚಾಯತ್ ಆಗಿ ಆಯ್ಕೆಯಾದ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಕರ್ನಾಟಕ ಪಂಚಾಯತ್ ರಾಜ್ ಪರಿಷತ್, ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ, ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ಸಂಪನ್ಮೂಲ ವ್ಯಕ್ತಿಗಳ ಕ್ಷೇಮಾಭಿವೃದ್ಧಿ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಡಿ: 25ರಂದು ಡಾ|| ಬಿ. ಆರ್. ಅಂಬೇಡ್ಕರ್ ಸಮುದಾಯ ಭವನ, ಗುಂಡ್ಲುಪೇಟೆ, ಚಾಮರಾಜನಗರ ಇಲ್ಲಿ ಅಬ್ದುಲ್ ನಜೀರ್ ಸಾಬ್ ಜನ್ಮ ದಿನದ ಅಂಗವಾಗಿ ಜರುಗಿದ ಪಂಚಾಯತ್ ರಾಜ್ ಸಬಲೀಕರಣ ದಿನಾಚರಣೆ ಮತ್ತು ಡಾ.ಚಿಕ್ಕಕೋಮರಿ ಗೌಡ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.

ಕರ್ನಾಟಕ ರಾಜ್ಯ 5ನೇ ಹಣಕಾಸು ಆಯೋಗದ ರಾಜ್ಯಾಧ್ಯಕ್ಷರು ಸಿ. ನಾರಾಯಣ ಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುಂಡ್ಲುಪೇಟೆ ತಾಲೂಕಿನ ಮಾನ್ಯ ಶಾಸಕರಾದ ಶ್ರೀ ಗಣೇಶ್ ಪ್ರಸಾದ್ ಅವರು ವಹಿಸಿದರು. ಅತ್ಯುತ್ತಮ ಗ್ರಾಮ ಪಂಚಾಯತ್ ವಿಭಾಗದಲ್ಲಿ ಬೆಳ್ತಂಗಡಿಯ ಉಜಿರೆ ಗ್ರಾಮ ಪಂಚಾಯತ್ ಗೆ ಡಾ|| ಚಿಕ್ಕ ಕೋಮರಿ ಗೌಡ ದತ್ತಿ ಪ್ರಶಸ್ತಿ ದೊರೆತಿದ್ದು, ಶ್ರೀ ಪ್ರಮೋದ್ ಹೆಗಡೆ, ರಾಜ್ಯ ವಿಕೇಂದ್ರೀಕೃತ ಯೋಜನೆ ಇದರ ರಾಜ್ಯ ಉಪಾಧ್ಯಕ್ಷರು ಪ್ರಶಸ್ತಿ ಪ್ರದಾನವನ್ನು ನೆರವೇರಿಸಿದರು. ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ರವಿ ಕುಮಾರ್ ಬರಮೇಲು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಅವರು ಪ್ರಶಸ್ತಿಯನ್ನು ಮತ್ತು ಗೌರವವನ್ನು ಸ್ವೀಕರಿಸಿದರು. ಮಾಜಿ ಸಚಿವರಾದ ಜೆ ಸಿ ಮಾಧು ಸ್ವಾಮಿ ಅವರು ಪಂಚಾಯತ್ ರಾಜ್ ದಾರಿ ದೀಪ ನಜೀರ್ ಸಾಬ್ ಪುಸ್ತಕ ಬಿಡುಗಡೆ ಮಾಡಿದರು.
ಕಾರ್ಯದರ್ಶಿ ಶ್ರವಣ್ ಕುಮಾರ್, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ಹರಿದ್ವಾರದಲ್ಲಿ ಗಂಗಾ ಮಾತೆಗೆ ಪೂಜೆ ಸಲ್ಲಿಸಿದ ಶಾಸಕ ಹರೀಶ್ ಪೂಂಜ

Suddi Udaya

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ತರಭೇತಿ ಕಾರ್ಯಾಗಾರ

Suddi Udaya

ಪಿಲಿಚಾಮುಂಡಿಕಲ್ಲಿನಲ್ಲಿ ಭಕ್ತಿ -ಭಾವ ಸಂಭ್ರಮದಿಂದ ಆದ್ದೂರಿಯಾಗಿ ನಡೆದ ದೊಂಪದಬಲಿ ಉತ್ಸವ

Suddi Udaya

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!