24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

ಶಿರ್ಲಾಲು: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ವಿವಿಧ ವೈದಿಕ,ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯುತ್ತಿದೆ.

ಶ್ರೀ ಮಹಾಲಕ್ಷ್ಮಿ ಕ್ಷೇತ್ರ ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಭಗವಂತನ ಸಾಮ್ರಾಜ್ಯದಲ್ಲಿ ನಾವು ಬದುಕುತ್ತಿದ್ದೇವೆ, ಇಂದಿನ ಸಮಾಜಕ್ಕೆ ಧರ್ಮದ ಶಿಕ್ಷಣದ ಅಗತ್ಯತೆ ಇದೆ.ನಮ್ಮ ಆಚರಣೆ, ಆರಾಧನ ಸ್ವರೂಪವನ್ನು ಅರ್ಥೈಸಿಕೊಂಡು ಬಾಳಬೇಕು. ನಮ್ಮೊಳಗಿರುವ ವೈಮನಸ್ಸು, ಸಂಘರ್ಷವನ್ನು ಬಿಟ್ಟು ಒಗ್ಗಟ್ಟಿನಲ್ಲಿ ಬಾಳಬೇಕೆಂದು ಎಂದರು.

ಕಲಬುರ್ಗಿ ಕೇಂದ್ರಿಯ ವಿಶ್ವವಿದ್ಯಾನಿಲಯದ ಉಪನ್ಯಾಸಕ ರೋಹಿಣಾಕ್ಷ ಶಿರ್ಲಾಲು ಧಾರ್ಮಿಕ ಉಪನ್ಯಾಸ ನೀಡಿದರು.ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಪ್ರಭಾಕರ ಬಂಗೇರ ಅಳದಂಗಡಿ ಅರಮನೆಯ ಶಿವಪ್ರಸಾದ ಅಜಿಲ,ಶಿರ್ಲಾಲು ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ಅಧ್ಯಕ್ಷ ನವೀನ್ ಸಾಮಾನಿ,ವೀರಶೈವ ಲಿಂಗಾಯತ ಸಮಾಜದ ಕಾರ್ಯದರ್ಶಿ ನವೀನ್ ಪ್ರಕಾಶ್,ಶಿರ್ಲಾಲು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಗುಣಮ್ಮ ಜೈನ್,ಹುರುಂಬಿದೋಟ್ಟು ದೇವಸ್ಥಾನದ ಆಡಳಿತ ಮೋಕ್ತೆಸರ ಹರ್ಷ ಆರ್ ಜೈನ್,ಬದ್ಯಾರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಮುಡ್ಜಾಲು,ಬಗ್ಯೋಟ್ಟು ಪಿಲಿಚಾಮುಂಡಿ ದೈವಸ್ಥಾನದ ಆಡಳಿತ ಮೊಕ್ತೇಸರ ಸುಂದರ ಬುನ್ನಲ್,ಸತ್ಯಸಾರ ಮುಪ್ಪಣ್ಯ ದೈವಸ್ಥಾನ ಅಧ್ಯಕ್ಷ ಬಾಬು ಎರ್ಮೆತ್ತೋಡಿ ಉಪಸ್ಥಿತರಿದ್ದು ಶುಭಕೋರಿದರು.

ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಪ್ರಶಾಂತ್ ಎಂ ಪಾರೆಂಕಿ, ,ಸೇವಾ ಸಮಿತಿ ಅಧ್ಯಕ್ಷ ಆನಂದ ಓಡಿಮಾರ್ ವೇದಿಕೆಯಲ್ಲಿದ್ದರು.ಕಾರ್ಯದರ್ಶಿ ರವಿರಾಜ್ ಗೌಡ ಸ್ವಾಗತಿಸಿದರು, ಚಂದ್ರಶೇಖರ ಶಿರ್ಲಾಲು ನಿರೂಪಿಸಿದರು‌.

ಸಾಂಸ್ಕೃತಿಕ ಕಾರ್ಯಕ್ರಮ: ಮಧ್ಯಾಹ್ನ ಯಕ್ಷಕೂಟ ಶಿರ್ಲಾಲು ಪ್ರಾಯೋಜಕತ್ವದಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರ ಕೊಡುವಿಕೆಯಿಂದ ಯಕ್ಷಗಾನ ತಾಳಮದ್ದಳೆ “ಭೀಷ್ಮ ವಿಜಯ” ಪ್ರದರ್ಶನಗೊಂಡಿತು. ರಾತ್ರಿ ಸ್ತಳೀಯ ಪ್ರತಿಭೆಗಳಿಂದ ನೃತ್ಯ ಸಿಂಚನ, ಶಿರ್ಲಾಲು ಅಂಗನವಾಡಿ ಕೇಂದ್ರದ ಪುಟಾಣಿಗಳಿಂದ ಚಿಲಿಪಿಲಿ ಕಾರ್ಯಕ್ರಮ ನಡೆಯಿತು.ಬೆಳಿಗ್ಗೆ ಭಜನಾ ಮಂಗಳೋತ್ಸವ, ಪುಣ್ಯಾಹವಾಚನ, ಗಣಪತಿ ಹೋಮ, ಮಕರ ಲಗ್ನದಲ್ಲಿ ಶರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಪಲ್ಲಪೂಜೆ, ಅನ್ನಸಂತರ್ಪಣೆ, ಗ್ರಾಮ ಸುಬೀಕ್ಷೆಗಾಗಿ ಶ್ರೀಚಕ್ರ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಸವಣಾಲು ಹಿಂದೂಸ್ಥಾನಿ ಭಕ್ತಿ ಸಂಗೀತಾ ಗುರುನಾಥ್ ಭಟ್ ಮತ್ತು ಸಂಗಡಿಗರಿಂದ ಭಜನಾ ಕಾರ್ಯಕ್ರಮ ನಡೆಯಿತು.

Related posts

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಷ್ಠಬಂಧ ಬ್ರಹ್ಮಕಲಶೋತ್ಸವ: ವೈಭಯುತ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಗಮನ‌ ಸೆಳೆದ ಕುಣಿತ ಭಜನೆ

Suddi Udaya

ಕೊಕ್ಕಡ ಉಪ್ಪಾರಹಳ್ಳದಲ್ಲಿ ದಿಢೀರನೆ ಎದ್ದ ಭೀಕರ ಸುಂಟರ ಗಾಳಿ: ಗಾಳಿಗೆ ಹಾರಿ ಹೋಯಿತು ಹಲವು ಮನೆಗಳ ಹಂಚು, ಶೀಟ್ -ತೋಟಗಳಲ್ಲಿ ಮುರಿದು ಬಿತ್ತು ಅಡಿಕೆ, ತೆಂಗಿನ ಮರಗಳು

Suddi Udaya

ನಾವೂರು ಗ್ರಾ.ಪಂ. ಅಧ್ಯಕ್ಷರಾಗಿ ಸುನಂದಾ, ಉಪಾಧ್ಯಕ್ಷರಾಗಿ ಪ್ರಿಯಾ ಲಕ್ಷ್ಮಣ್ ಆಯ್ಕೆ

Suddi Udaya
error: Content is protected !!