25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಬೆಳ್ತಂಗಡಿ ವತಿಯಿಂದ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಒತ್ತಾಯಿಸಿ ಬೆಳ್ತಂಗಡಿ ಠಾಣೆಯಲ್ಲಿ ಡಿ.26 ರಂದು ದೂರು ನೀಡಲಾಯಿತು.
ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿ ಮತ್ತು ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗು ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಚ್ಯುತಿ ತರುವಂತಹ ಮಾತುಗಳನ್ನು ಆಡಿರುವ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೂಡಲೇ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಪೊಲೀಸ್ ಉಪ ನಿರೀಕ್ಷಕರಿಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಬೆಳ್ತಂಗಡಿಘಟಕ ಅಧ್ಯಕ್ಷರಾದ ಶಮಾ ಆಲಿ ಉಜಿರೆ, ಕಾರ್ಯದರ್ಶಿ ನಸೀಮಾ ಬೆಳ್ತಂಗಡಿ, ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ, ಸದಸ್ಯರಾದ ಅಡ್ವೋಕೇಟ್ ಅಸ್ಮಾ, ಸೌದ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಡಿ.2: ಯಕ್ಷ ಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ವತಿಯಿಂದ ಯಕ್ಷ ಸಂಭ್ರಮ- 2023: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೊಕ್ಕಾಡಿಗೋಳಿ ಶಾಲಾ ಪ್ರಾರಂಭೋತ್ಸವ

Suddi Udaya

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya
error: Content is protected !!