September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪೊಲೀಸ್ ದೂರು

ಬೆಳ್ತಂಗಡಿ : ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಬೆಳ್ತಂಗಡಿ ವತಿಯಿಂದ ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಕಲ್ಲಡ್ಕ ಪ್ರಭಾಕರ ಭಟ್ ಬಂಧನಕ್ಕೆ ಒತ್ತಾಯಿಸಿ ಬೆಳ್ತಂಗಡಿ ಠಾಣೆಯಲ್ಲಿ ಡಿ.26 ರಂದು ದೂರು ನೀಡಲಾಯಿತು.
ಮಂಡ್ಯದಲ್ಲಿ ನಡೆದ ಸಮಾವೇಶದಲ್ಲಿ ಉದ್ದೇಶಪೂರ್ವಕವಾಗಿ ಮಹಿಳೆಯರನ್ನು ಅತ್ಯಂತ ಕೀಳಾಗಿ ಅವಮಾನಿಸಿ ಮತ್ತು ವಿಚ್ಚೇದಿತ ಮಹಿಳೆಯರಿಗೆ ಕಳಂಕ ಹಚ್ಚುವ ಹಾಗು ಮುಸಲ್ಮಾನರ ಧಾರ್ಮಿಕ ಭಾವನೆಗಳಿಗೆ ಕುಂದುಂಟು ಮಾಡುವ ಮುಸ್ಲಿಂ ಮಹಿಳೆಯರ ಹಕ್ಕುಗಳಿಗೆ ಚ್ಯುತಿ ತರುವಂತಹ ಮಾತುಗಳನ್ನು ಆಡಿರುವ ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೂಡಲೇ ಪ್ರಕರಣ ದಾಖಲಿಸಿ ಬಂಧಿಸಬೇಕೆಂದು ಪೊಲೀಸ್ ಉಪ ನಿರೀಕ್ಷಕರಿಗೆ ದೂರು ನೀಡಲಾಯಿತು.
ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ (ವಿಮ್) ಬೆಳ್ತಂಗಡಿಘಟಕ ಅಧ್ಯಕ್ಷರಾದ ಶಮಾ ಆಲಿ ಉಜಿರೆ, ಕಾರ್ಯದರ್ಶಿ ನಸೀಮಾ ಬೆಳ್ತಂಗಡಿ, ಕೋಶಾಧಿಕಾರಿ ಹಸೀನಾ ಬೆಳ್ತಂಗಡಿ, ಸದಸ್ಯರಾದ ಅಡ್ವೋಕೇಟ್ ಅಸ್ಮಾ, ಸೌದ ಬೆಳ್ತಂಗಡಿ ಉಪಸ್ಥಿತರಿದ್ದರು.

Related posts

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ಸವಣಾಲು: ಆಟೋ ಚಾಲಕ ಲೋಕಯ್ಯ ಹೆಗ್ಡೆ ನಿಧನ

Suddi Udaya

ಉಜಿರೆ : ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷರು ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯಕ್ಕೆ ಭೇಟಿ

Suddi Udaya

ಬೈಕ್‌ಗಳ ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೋರ್ವ ಗಂಭೀರ ಗಾಯ

Suddi Udaya

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya
error: Content is protected !!