32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

ಉಜಿರೆ : ಇಂದು ಪ್ರಪಂಚದಾದ್ಯಂತ ಆಹಾರ ವ್ಯರ್ಥತೆ ಹೆಚ್ಚಾಗುತ್ತಿದೆ. ಇಂದೂ ಸಹ ಆಹಾರ ಇಲ್ಲದೆ ಬಳಲುವವರು ಅನೇಕರಿದ್ದಾರೆ. ಅಂತವರಿಗೆ ತಲುಪಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಈ ಮೂಲಕ ಸಮಾಜದ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯ ಆಗಬೇಕಾಗಿದೆ. ಇದಕ್ಕಾಗಿ ಯುವ ಜನತೆ ಇಂತಹ ಜಾಗೃತಿಯ ಕೆಲಸ ಮಾಡಬೇಕಾಗಿದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಡಾ. ಎ. ಜಯಕುಮಾರ ಶೆಟ್ಟಿ ಅವರು ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಯೋಜಿಸಿದ ಜಾಗೃತಿ ಸಪ್ತಾಹ ಉದ್ಘಾಟನೆ ಮಾಡಿ ಆಹಾರ ತ್ಯಾಜ್ಯ ಜಾಗೃತಿ ಕುರಿತು ಮಾತನಾಡಿದರು.

ಜಾಗ್ರತೆಯಿಂದ ಇರುವವರಿಗೆ ಭಯ ಎಂಬುದು ಇರುವುದಿಲ್ಲ. ಯಾವಾಗಲೂ ಆತ್ಮವಿಶ್ವಾಸ ಇರಬೇಕು. ನಮ್ಮ ತಪ್ಪನ್ನು ನಾವೇ ಗುರುತಿಸಿಕೊಳ್ಳಬೇಕು. ಅದರೊಂದಿಗೆ ಇಂತಹ ಜಾಗೃತಿ ಕಾರ್ಯಗಳು ಹೆಚ್ಚಾಗಬೇಕು ಎಂದು ಈ ಸಂದರ್ಭದಲ್ಲಿ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ಮಾತನಾಡಿ ಯುವ ಜನತೆ ಸಮಾಜದ ಅನೇಕ ಸಮಸ್ಯೆಗಳಿಗೆ ಓಗೊಟ್ಟು ಜಾಗೃತಿ ಮಾಡುವ ಕಾರ್ಯ ಮಾಡಬೇಕು. ಇದರಿಂದ ಸಮಾಜದೊಂದಿಗೆ ದೇಶದ ಸುಧಾರಣೆ ಸಾಧ್ಯ ಎಂದು ತಿಳಿಸಿದರು.

ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ ಶುಭಾಶಂಸನೆ ಮಾಡಿದರು. ರಾ.ಸೇ.ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಘಟಕದ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಉಪಸ್ಥಿತರಿದ್ದರು.

ದಿವ್ಯಶ್ರೀ ಸ್ವಾಗತಿಸಿದರು. ಪಲ್ಲವಿ ನಿರೂಪಿಸಿ , ಶಶಾಂಕ್ ವಂದಿಸಿದರು.

Related posts

ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವಿರುದ್ದದ ಪ್ರಕರಣ ಹೈಕೋರ್ಟ್‌ನಲ್ಲಿ ವಜಾ

Suddi Udaya

ಅ.31: ಅಳದಂಗಡಿಯಲ್ಲಿ ಶ್ರೀ ಮಹಾವೀರ ಮೆಡಿಕಲ್ಸ್ ಶುಭಾರಂಭ

Suddi Udaya

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Suddi Udaya

ರಾಜ್ಯ ಮಟ್ಟದ ಜಾನಪದ ಗೀತ ಗಾಯನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಪ್ರಥಮ

Suddi Udaya

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya
error: Content is protected !!