38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಅರುವ ಕೊರಗಪ್ಪ ಶೆಟ್ಟಿ ಅವರಿಗೆ “ಜಾನಪದ ಶ್ರೀ” ಪ್ರಶಸ್ತಿ

ಬೆಳ್ತಂಗಡಿ: ಸರಕಾರವು 2022-23ನೇ ಸಾಲಿನ ಜಾನಪದ ಶ್ರೀ ಪ್ರಶಸ್ತಿಗೆ ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದರು ರಾಜ್ಯ ಪ್ರಶಸ್ತಿ ವಿಜೇತರೂ ಆಗಿರುವ ಅರುವ ಕೊರಗಪ್ಪ ಶೆಟ್ಟಿ (83) ಅವರನ್ನು ಆಯ್ಕೆಮಾಡಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಡಿ.27 ರಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದರು.

‘ಅರುವದವರು’ ಎಂದೇ ಪ್ರಸಿದ್ಧಿ ಅಳದಂಗಡಿಯ ಸುಬ್ಬಯ್ಯ ಶೆಟ್ಟಿ- ಕಾಂತಕ್ಕೆ ದಂಪತಿಯ ಹಿರಿಯ ಮಗನಾಗಿ 28 ನವೆಂಬರ್ 1940ರಲ್ಲಿ ಜನಿಸಿದ ‘ಅರುವದವರು’ ತಮ್ಮ 15ನೇ ವರ್ಷದಲ್ಲಿ ಕಟೀಲು ಮೇಳವನ್ನು ಸೇರಿಕೊಂಡು 6 ದಶಕಗಳಿಂದ ವಿವಿಧ ಮೇಳಗಳಲ್ಲಿ ಕಲಾಸೇವೆ ಮಾಡುತ್ತಿದ್ದಾರೆ.
‘ಗದಾಯುದ್ಧ’ದ ಕೌರವ, ‘ಕೋಟಿ ಚೆನ್ನಯ’ದ ಕೋಟಿ ಮುಂತಾದ ಪಾತ್ರಗಳ ನಿರ್ವಹಣೆಯಲ್ಲೂ ಪ್ರಸಿದ್ದಿ ಪಡೆದಿದ್ದಾರೆ. 3 ವರ್ಷ ಕಾಲ ಕಟೀಲು ಮೇಳ, ಕೂಡ್ಲು ಮೇಳದಲ್ಲಿ 2 ವರ್ಷ, ಕುಂಡಾವು ಮೇಳದಲ್ಲಿ 7 ವರ್ಷ, ಕದ್ರಿ, ಮಂಗಳಾ ದೇವಿ, ಎಡನೀರು ಮೇಳ ಗಳಲ್ಲಿ ಸೇವೆ ಸಲ್ಲಿಸಿ, 3 ದಶಕಳ ಕಾಲ ಕರ್ನಾಟಕ ಮೇಳದಲ್ಲಿ ತಾರಾ ಕಲಾವಿದರಾಗಿ ರಂಗಸ್ಥಳವನ್ನಾಳಿ ಪ್ರಸ್ತುತ ಬಪ್ಪನಾಡು ಮೇಳದಲ್ಲಿ ಮುಖ್ಯ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮಂಗಳಾದೇವಿ ಮೇಳದಲ್ಲಿ 12 ವರ್ಷ ಹಾಗೂ ಕರ್ನಾಟಕ ಯಕ್ಷಗಾನ ನಾಟಕ ಸಭಾದಲ್ಲಿ ಕನ್ನಡ ಯಕ್ಷಗಾನ ಪ್ರಸಂಗಗಳಲ್ಲಷ್ಟೇ ಅಲ್ಲದೇ ಹಲವಾರು ತುಳು ಪ್ರಸಂಗಗಳಲ್ಲೂ ಮುಖ್ಯ ಪಾತ್ರಗಳನ್ನು ನಿರ್ವಹಿಸಿ ಜನಮನ ಗೆದ್ದಿದ್ದಾರೆ.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಎಡನೀರು ಪ್ರಶಸ್ತಿ, ಶ್ರೀ ಪೇಜಾವರ ಮಠದ ರಾಮವಿಠಲ ಪ್ರಶಸ್ತಿ, ಮಾಣಿಲ ಪ್ರಶಸ್ತಿ, ಉಡುಪಿ ಯಕ್ಷಗಾನ ಕಲಾರಂಗದ ಡಾ। ಬಿ.ಬಿ. ಶೆಟ್ಟಿ ಪ್ರಶಸ್ತಿ ಸೇರಿ ಹಲವಾರು ಪ್ರಶಸ್ತಿ ಅರಸಿ ಬಂದಿವೆ. ಶ್ರೀ ಅರುವ ಕೊರಗಪ್ಪಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನದ ಮೂಲಕ ಕಲಾವಿದರಿಗೆ ನೆರವು, ಹೆಣ್ಣು ಮಕ್ಕಳ ಮದುವೆಗೆ ನೆರವು, ವಿದ್ಯಾರ್ಥಿ ವೇತನ ವಿತರಿಸುತ್ತ ಬಂದಿದ್ದಾರೆ.

Related posts

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

Suddi Udaya

ಮಚ್ಚಿನ: ಹಿಂದೂ ರುದ್ರ ಭೂಮಿಯ ಕಾಮಗಾರಿಗೆ ಮಂಜೂರಾದ ಅನುದಾನವನ್ನು ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೆ ಗೌಡರಿಂದ ರೂ 2.5 ಲಕ್ಷ ಹಸ್ತಾಂತರ

Suddi Udaya

ನಾರಾವಿ ವಲಯ ಶ್ರೀ ಕ್ಷೇ.ಧ. ಗ್ರಾ. ಯೋಜನೆಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!