32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತ್ ಬೆಳಾಲು ಮತ್ತು ಉಜಿರೆ ಶ್ರೀ ಧ ಮ ಕಾಲೇಜಿನ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದವರಿಂದ ಪರೀಕ್ಷೆಯ ತಯಾರಿ, ಎಸ್ ಎಸ್ ಎಲ್ ಸಿ ಯ ನಂತರದ ಅವಕಾಶಗಳ ಬಗ್ಗೆ ಮಾಹಿತಿ ಕಾರ್ಯಕ್ರಮ ಜರಗಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಗ್ರಾಮ ಪಂಚಾಯತ್ತಿನ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡರು ಮಾತನಾಡುತ್ತಾ, ಯೋಜನಾ ಬದ್ಧವಾದ ಓದು ಮತ್ತು ಗುರಿ ನಿರ್ಧಾರಿತ ಅಧ್ಯಯನ ವಿದ್ಯಾರ್ಥಿ ಜೀವನದ ಯಶಸ್ಸಿನ ಮುಖ್ಯ ಅಂಶವಾಗಿರುತ್ತದೆ. ಜೇವನದಲ್ಲಿ ಅವಕಾಶಗಳು ಎಲ್ಲರಿಗೂ ಸಮಾನವಾಗಿರುತ್ತದೆ. ವಿದ್ಯಾರ್ಥಿಗಳು ಅಂತಹ ಅವಕಾಶವನ್ನು ಪಡಕೊಳ್ಳುವ ಪ್ರಯತ್ನಶೀಲರಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಯ ಅಧ್ಯಕ್ಷತೆಯನ್ನು ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರು ವಹಿಸಿದ್ದರು. ಉಪನ್ಯಾಸಕರಾದ ಡಾ. ಅಕ್ಷತಾ ರಾವ್ ಮತ್ತು ಪಂಚಾಯತ್ತಿನ ವಾಚನಾಲಯ ಅಧಿಕಾರಿ ಡೀಕಯ್ಯ ಗೌಡರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮವನ್ನು ಸಂಯೋಜಿಸಿದ್ದರು.

Related posts

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ.‌ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ನ ಏಳು ವಿದ್ಯಾರ್ಥಿಗಳಿಗೆ ನಿಪುಣ್ ಪ್ರಶಸ್ತಿ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ರವರಿಂದ ಪ್ರಶಸ್ತಿ ಪ್ರದಾನ

Suddi Udaya

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya
error: Content is protected !!