September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿರಾಜ್ಯ ಸುದ್ದಿ

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡ‌ರ್ ಮೇಲೆರಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಡಿ.29 ರಂದು ಮಧ್ಯರಾತ್ರಿ ಕಂಬದಕೋಣೆಯಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪಡಂಗಡಿ ಸಮೀಪದ ನಡಿಬೆಟ್ಟು ಎಂಬಲ್ಲಿಯ ಪ್ರದ್ಯೋತ್ ಮೃತ ಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ.

ಕಾರವಾರದಿಂದ ಕುಂದಾಪುರ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಂಬದಕೋಣೆ ಜಂಕ್ಷನ್ ಸಮೀಪ ಚಾಲಕನ ನಿಯಂತ್ರಣ ತಪ್ಪಿದೆ ಪರಿಣಾಮ ಡಿವೈಡರ್ ಮೇಲೆ ಏರಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅಪಘಾತದ ವೇಳೆ ನುಜ್ಜುಗುಜ್ಜಾದ ಕಾರಿನೊಳಗೆ ಸಿಲುಕಿದ್ದ ಕಾರಿನ ಚಾಲಕನನ್ನು ಸ್ಥಳೀಯರ ಸಹಾಯದಿಂದ ಹೊರ ತೆಗೆದು ಬೈಂದೂರು ತಾಲೂಕು ಆಸ್ಪತ್ರೆಗೆ ದಾಖಲಿಸಿದರು. ಆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ವೈದ್ಯರು ಪರೀಕ್ಷಿಸಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಮೃತ ವ್ಯಕ್ತಿ ಬೆಳ್ತಂಗಡಿ ತಾಲೂಕಿನ ಪಡಂಗಡಿಯ ನಡಿಬೆಟ್ಟು ಗುತ್ತು ನೇಮಿರಾಜ ಶೆಟ್ಟಿಯವರ ಮೊಮ್ಮಗ ಹಾಗೂ ದಿ. ಪ್ರಶಾಂತ್ ನಡಿಬೆಟ್ಟು ಅವರ ಪುತ್ರನಾಗಿದ್ದು ಇವರ ತಂದೆ ಕಳೆದ ಕೆಲವು ವರ್ಷಗಳ ಹಿಂದೆ ಕಂಬಳದಿಂದ ಹಿಂದಿರುಗುತ್ತಿರುವ ವೇಳೆ ಬೈಕ್‌ ಅಪಘಾತದಲ್ಲಿ ಮೃತ ಪಟ್ಟಿದ್ದರು .

ಘಟನೆ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಬೈಂದೂರು ಪಿ.ಎಸ್.ಐ ತಿಮ್ಮೇಶ್ ಬಿ.ಎನ್‌.ಮತ್ತು ಸಿಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related posts

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ತಾಲೂಕು ಯುವಜನ ಒಕ್ಕೂಟದಿಂದ ತಾಲೂಕು ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

Suddi Udaya

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya

‘ಹೆಚ್ಚುವರಿ ನೀರಿನ ಶುಲ್ಕದಿಂದಾಗಿ ಜನಸಾಮಾನ್ಯರಿಗೆ ಹೊರೆ’ : ನಾವೂರು ಎಸ್ ಡಿ ಪಿ ಐ ನೇತೃತ್ವದಲ್ಲಿ ಮನವಿ

Suddi Udaya
error: Content is protected !!