24.4 C
ಪುತ್ತೂರು, ಬೆಳ್ತಂಗಡಿ
April 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

ಕಳಿಯ: ಇಂದು ಡಿ. 30 ರಂದು ಬೆಳ್ತಂಗಡಿ ತಾಲೂಕು ಕಳಿಯ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಗ್ರಾಪಂ ಅಧ್ಯಕ್ಷರಾದ ದಿವಾಕರ ಎಂ ಇವರ ಅಧ್ಯಕ್ಷತೆಯಲ್ಲಿ ಮಕ್ಕಳ ಗ್ರಾಮ ಸಭೆ ನಡೆಯಿತು.

ಕಾರ್ಯಕ್ರಮ ವನ್ನು ಪಂಚಾಯತ್ ಕಾರ್ಯದರ್ಶಿಯವರು ನಡೆಸಿಕೊಟ್ಟರು. ಈ ಸಭೆಯಲ್ಲಿ ಗ್ರಾಮ ಡಿಜಿ ವಿಕಸನ ತಾಲೂಕು ಸಂಯೋಜಕರಾದ ಅಮೃತ್ ಗ್ರಾಮ ಡಿಜಿ ವಿಕಸನದ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಗ್ರಾ. ಪಂ. ಡಿಜಿಟಲ್ ಗ್ರಂಥಾಲಯವನ್ನು ನಿರಂತರ ಮತ್ತು ಅತ್ಯುತ್ತಮವಾಗಿ ಬಳಸಿಕೊಂಡ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ಬಹುಮಾನವಾಗಿ ನೀಡಲಾಯಿತು.

ಸಭೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷರು, ಪಂ. ಸದಸ್ಯರು ಮತ್ತು ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು ಮತ್ತು ಶಾಲಾ ಶಿಕ್ಷಕರು ಹಾಗೂ ಅಂ. ಕಾರ್ಯಕರ್ತೆಯರು ಹಾಗೂ ಪಂ. ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ವಿದ್ಯಾಮಾತಾ ಅಕಾಡೆಮಿಯಲ್ಲಿ ತರಬೇತಿ ಪಡೆದು ಭಾರತೀಯ ಸೇನೆಗೆ ಆಯ್ಕೆಗೊಂಡ ಸೃಜನ್ ಕೆ.ಆರ್.

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭೆ

Suddi Udaya
error: Content is protected !!