24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ನಿವೃತ್ತಿಗೊಂಡ ಪ್ರಥಮ ದರ್ಜೆ ಸಹಾಯಕ ನಾರಾಯಣ್ ನಾಯ್ಕ್ ಪಿ. ರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕರಾಗಿ 35 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ನಾರಾಯಣ್ ನಾಯ್ಕ್ ರವರಿಗೆ ಡಿ.30 ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಬೀಳ್ಕೊಡಲಾಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಅಧ್ಯಕ್ಷ ಶಿವಶಂಕರ್ ಸಮಾರಂಭ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಟಿ. ಜಿ. ಟಿ. ಶಿಕ್ಷಕರ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ಪ್ರಾ. ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಕಿಶೋರ್, ಎನ್ ಪಿ ಎಸ್ ಸಂಘದ ಅಧ್ಯಕ್ಷ ಸುರೇಶ್ ಮಾಚಾರು, ತಾಲೂಕು ಪ್ರೌ.ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟೇಶ್ ತುಳಪುಳೆ, ಕಾರ್ಡಿನೇಟರ್ ಮೋಹನ್ ಕುಮಾರ್, ಕಾರ್ಯದರ್ಶಿ ಪ್ರಕಾಶ್, ಪ್ರೌ. ಶಾಲಾ ಸಹಶಿಕ್ಷಕರ ಅಧ್ಯಕ್ಷ ರಾಧಾಕೃಷ್ಣ ಉಪಸ್ಥಿತರಿದ್ದರು.

ಪ್ರ. ದ. ಸ. ಪಡಂಗಡಿ ಶ್ರೀಮತಿ ಶಾರದಾ ಭಟ್ ಪ್ರಾರ್ಥಿಸಿ, ಶ್ರೀಮತಿ ಸುಧಾ ಸುರೇಶ್ ಸ್ವಾಗತಿಸಿದರು. ಪ್ರವೀಣ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಸ. ಪ್ರೌ. ಶಾಲೆ ಪ್ರಕಾಶ್ ಬಿ. ಆರ್ ಧನ್ಯವಾದವಿತ್ತರು.

Related posts

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ನಾವೂರು ಗ್ರಾ.ಪಂ. ಅಧ್ಯಕ್ಷರಾಗಿ ಸುನಂದಾ, ಉಪಾಧ್ಯಕ್ಷರಾಗಿ ಪ್ರಿಯಾ ಲಕ್ಷ್ಮಣ್ ಆಯ್ಕೆ

Suddi Udaya

ಗೇರುಕಟ್ಚೆ: ಸಾವಿರ ಕದಳಿ ಬಾಳೆ ಗೊನೆ ಚಮತ್ಕಾರ

Suddi Udaya

ಮೇ 3 -12: ಕಾಜೂರು ಉರೂಸ್ ಮಹಾಸಂಭ್ರಮ: ಮೇ 12 ರಂದು ಸರ್ವಧರ್ಮೀಯರ ಸೌಹಾರ್ದ ಸಂಗಮ- ಉರೂಸ್ ಸಮಾರೋಪ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿಯ ಪದಪ್ರದಾನ ಕಾರ್ಯಕ್ರಮ

Suddi Udaya
error: Content is protected !!