38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ: ಹೊತ್ತಿ ಉರಿದ ಬೈಕ್ : ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ

ಬೆಳ್ತಂಗಡಿ: ನಂಬರ್ ಪ್ಲೇಟ್ ಇಲ್ಲದ ಬೈಕೊಂದು ಹೊತ್ತಿ ಉರಿದ ಘಟನೆ ಬೆಳ್ತಂಗಡಿ ತಾಲೂಕಿನ ಚರ್ಚ್ ರೋಡ್ ಬಳಿ ಡಿ 31 ರಂದು ಮಧ್ಯಾಹ್ನ ನಡೆದಿದೆ.

ಬೆಳ್ತಂಗಡಿ ಚರ್ಚ್ ರೋಡ್ ನ ಸೈಂಟ್ ತೆರೇಸಾ ಹೈಸ್ಕೂಲು ಎದುರು ರಸ್ತೆಯಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಬೈಕೊಂದು ಹೊತ್ತಿ ಉರಿಯುತಿದ್ದು ಇದನ್ನು ಗಮನಿಸಿದ ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಿದ್ದಾರೆ.

ಅದರೆ ಬೈಕ್ ನ ವಾರೀಸುದಾರರು ಯಾರೂ ಅಲ್ಲಿ ಇರಲಿಲ್ಲ ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಗೆ ಸ್ಥಳೀಯರು ಮಾಹಿತಿ ನೀಡಿದ್ದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.ಸ್ಥಳದಲ್ಲಿ ವಾರೀಸುದಾರು  ಹಾಗೂ ನಂಬರ್  ಪ್ಲೇಟ್  ಇಲ್ಲದ ಬೈಕ್ ಮೇಲೆ ಅನುಮಾನ ಮೂಡಿದ್ದು ಎಲ್ಲಿಂದಲೋ ನಂಬರ್ ಪ್ಲೇಟ್ ತೆಗೆದು ಬೈಕ್ ಕದ್ದು ತರುವ ವೇಳೆ ಬೆಂಕಿ ಕಾಣಿಸಿಕೊಂಡಿದ್ದು ಈ ಸಮಯದಲ್ಲಿ ಬೈಕ್ ಅಲ್ಲೆ ಬಿಟ್ಟು ಪರಾರಿಯಾಗಿರಬಹುದು ಅಥವಾ ಏನಾದರೂ ಗಾಯಗಳಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬೈಕ್ ಬಿಟ್ಟು ತೆರಳಿರುವ ಬಗ್ಗೆಯೂ   ಅನುಮಾನಿಸಲಾಗಿದೆ.

ಒಂದು ವಾರಗಳ ಹಿಂದೆ ಬೈಕೊಂದು ಕಳ್ಳತನವಾಗಿದ್ದು ಅದೇ ಬೈಕ್ ಆಗಿರಬಹುದೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತಿದ್ದಾರೆ.

Related posts

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಬಳಂಜ ಗ್ರಾ.ಪಂ ಹಾಗೂ ಅರಣ್ಯ ಇಲಾಖೆಯಿಂದ ವನಮಹೋತ್ಸವ ಆಚರಣೆ

Suddi Udaya

ಎಸ್ ಡಿ ಎಮ್ ಕಾಲೇಜಿನ ವಾರ್ಷಿಕೋತ್ಸವ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya
error: Content is protected !!