26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಲ್ಪಾಡಿ ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಕೊಲ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಬೆಳಾಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ವಿದ್ಯಾರವರು ಮಹಿಳೆಯು ತನ್ನನ್ನು ತಾನು ಮರೆತು ತನ್ನ ಕುಟುಂಬದ ಅತ್ತೆ ಮಾವನ ಗಂಡ ಮಕ್ಕಳ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುತ್ತಾಳೆ. ಒಂದು ಮಹಿಳೆ ಅಭಿವೃದ್ಧಿಯಾದರೆ ಕುಟುಂಬ ಅಭಿವೃದ್ಧಿ ಆಗಲು ಸಾಧ್ಯ. ಎಂಬ ನಿಟ್ಟಿನಲ್ಲಿ ಮಹಿಳೆಯರಿಗಾಗಿ ಮಾತೃಶ್ರೀ ಹೇಮಾವತಿ ಅಮ್ಮನವರು ಹಮ್ಮಿಕೊಂಡ ಈ ಜ್ಞಾನ ವಿಕಾಸ ಕಾರ್ಯಕ್ರಮದಿಂದ ಅದೆಷ್ಟು ಮಹಿಳೆಯರಿಗೆ ವಿವಿಧ ಮಾಹಿತಿಯನ್ನು ನೀಡುವುದರೊಂದಿಗೆ ತನ್ನ ಪ್ರತಿಭೆಗಳನ್ನು ಹೊರಹಾಕಲು ಆವಕಾಶ ಕಲ್ಪಿಸಿರುತ್ತಾರೆ ಎಂದು ತಿಳಿಸಿದರು.

ತಾಲೂಕಿನ ಗೌರವಾನ್ವಿತ ಯೋಜನಧಿಕಾರಿ ಸುರೇಂದ್ರರವರು ಜ್ಞಾನವಿಕಾಸ ಕೇಂದ್ರದ ದ್ಯೇಯೋದ್ದೇಶಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಒಕ್ಕೂಟ ಮಾಜಿ ಅಧ್ಯಕ್ಷ ಎಲ್ಯಣ್ಣ ನಾಯಕ್ ನೂತನ ಅಧ್ಯಕ್ಷರಾದ ನೀಲಾವತಿ, ವಲಯ ಮೇಲ್ವಿಚಾರಕಿ ವನಿತಾ , ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಮಧುರ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನ ವಿಕಾಸ ಕೇಂದ್ರದ ಸದಸ್ಯೆ ಶ್ರೀಮತಿ ಲೀಲಾವತಿಯವರು ವಹಿಸಿದ್ದರು. ಸೇವಾ ಪ್ರತಿನಿಧಿ ಪ್ರಮೀಳಾರವರು ನಿರೂಪಿಸಿ, ಸಾವಿತ್ರಿ ಸ್ವಾಗತಿಸಿ, ಲೀಲಾವತಿ ಧನ್ಯವಾದವಿತ್ತರು. ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.

Related posts

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

Suddi Udaya

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಹಾಡು ಹಗಲೇ ಮನೆಯ ಬಾಗಿಲ ಬೀಗವನ್ನು ಮುರಿದು ಗಾದ್ರೇಜ್‌ನ ಲಾಕರ್ ನಲ್ಲಿಟ್ಟಿದ್ದ ರೂ. 1.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಕುರಾಯ ಶ್ರೀ ಸದಾಶಿವ ದೇವಸ್ಥಾನ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವಕ್ಕೆ ನವಶಕ್ತಿ ಶಶಿಧರ ಶೆಟ್ಟಿ ಬರೋಡ ಭೇಟಿ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಬ್ರಹ್ಮಕಲಶೋತ್ಸವಗಣಪತಿ ಹೋಮ, ಮಕರ ಲಗ್ನದಲ್ಲಿ ಶ್ರೀ ಉಳ್ಳಾಲ್ತಿ ದೇವಿಯ ಪ್ರತಿಷ್ಠೆ ಜಿವ ಕಲಶಾಭಿಷೇಕ,ಗ್ರಾಮ ಸುಭೀಕ್ಷೇಗಾಗಿ ಶ್ರೀಚಕ್ರ ಪೂಜೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!