26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯ ನಿರ್ವಹಣಾ ಶಾಸ್ತ್ರ ವಿಭಾಗದ ವತಿಯಿಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಮ್ಯಾನೇಜ್ಮೆಂಟ್ ಫೆಸ್ಟ್ ” IGNITE – 2K23 ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಪ್ರಾಂಶುಪಾಲರಾದ ಡಾ. ಆ್ಯಂಟನಿ ಟಿ.ಪಿ ರವರು ನೆರವೇರಿಸಿ ವಿದ್ಯಾರ್ಥಿ ಜೀವನವೇ ಕಲಿಕೆಯ ಪ್ರಮುಖ ಘಟ್ಟ ಇಲ್ಲಿಯ ಕಲಿಕೆ ಮುಂದಿನ ಬದುಕಿಗೆ ದಾರಿಯಾಗುವುದು. ತಮ್ಮಲ್ಲಿರುವ ಆಸಕ್ತಿ, ಪೆಸ್ಟ್ ನ ಆಯೋಜನೆ ಇವೆಲ್ಲವು ಇದರ ರೂಪಗಳು. ಎಲ್ಲವನ್ನೂ ಕಲಿತು ಯಶಸ್ಸು ನಿಮ್ಮದಾಗಿಸಿಕೊಳ್ಳಿ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲ ಪ್ರೊ. ರಾಘವ. ಯನ್ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಿವಿಧ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗಹಿಸಿದ್ದರು.

ಸಮಾರೋಪ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಪ್ರೊ. ಗಣಪತಿ ಭಟ್ ಕುಳಮರ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿ ಪ್ರಶಸ್ತಿ ಪ್ರಧಾನ ಮಾಡಿದರು.

ಅಧ್ಯಕ್ಷತೆಯನ್ನು ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದ ಡಾ. ಸುಬ್ರಹ್ಮಣ್ಯ ಕೆ ಇವರು ವಹಿಸಿದ್ದರು.

ಫೆಸ್ಟ್ ನ ಸಮಗ್ರ ಪ್ರಶಸ್ತಿಯನ್ನು ವಾಣಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಮತ್ತು ರನ್ನರ್ ಅಪ್ ಪ್ರಶಸ್ತಿಯನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು, ನಡ ಪಡೆದುಕೊಂಡಿತು.

ಕಾರ್ಯಕ್ರಮದಲ್ಲಿ ಭೋದಕ ಮತ್ತು ಭೋದಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಕನ್ಯಾಡಿ 2 ಸ.ಉ.ಹಿ. ಪ್ರಾ. ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ

Suddi Udaya

ಯಕ್ಷಭಾರತಿ ಕನ್ಯಾಡಿ ಸಂಸ್ಥೆಯು ಪುರಸ್ಕರಿಸುವ ಯಕ್ಷಭಾರತಿ ಪ್ರಶಸ್ತಿಗೆ ಮೂಡಬಿದರೆಯ ಕೆ ಶ್ರೀಪತಿ ಭಟ್ ಆಯ್ಕೆ

Suddi Udaya

ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿಭಾಗ ಹಾಗೂ ಸರಸ್ವತಿ ಪ್ರೌಢಶಾಲೆ ಸಹಯೋಗದಲ್ಲಿ “ಕೆಸರ್ದ ಗೊಬ್ಬು

Suddi Udaya
error: Content is protected !!