26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ: ವರ್ಗಾವಣೆಗೊಂಡ ಕುಸುಮಾಧರ ಬಿ ರವರಿಗೆ ತಾಲೂಕು ಪಂಚಾಯತ್ ಹಾಗೂ ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಸರ್ಕಾರದ ಆದೇಶದಂತೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿಗೆ ವರ್ಗಾವಣೆಯಾಗಿರುವ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ ಬಿ ಇವರಿಗೆ ತಾಲೂಕು ಪಂಚಾಯತ್ ಮತ್ತು ವಿವಿಧ ಇಲಾಖೆ ವತಿಯಿಂದ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಈ ಸಂದರ್ಭ ತಾಲೂಕು ತಹಶಿಲ್ದಾರ್ ಪೃಥ್ವಿ ಸಾನಿಕಮ್, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಎನ್, ನಗರ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ನಿತಿನ್ ನಾಯಕ್, ಸಹಾಯಕ ಅಭಿಯಂತರರಾದ ಹರ್ಷಿತ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಶ್ರೀಮತಿ ಅಜಿತಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಹೇಮಚಂದ್ರ, ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕರಾದ ಕೆ.ಎಸ್ ಚಂದ್ರಶೇಖರ್, ಕೃಷಿ ಸಹಾಯಕ ನಿರ್ದೇಶಕರು ರಂಜಿತ್, ಸಹಕಾರ ಇಲಾಖೆಯ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪ್ರತಿಮಾ, ಪಂಚಾಯತ್ ರಾಜ್ ಇಲಾಖಾಧಿಕಾರಿಗಳ ಮತ್ತು ನೌಕರರ ಜಿಲ್ಲಾ ಸಂಘ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಸುಧಾಕರ್, ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಪ್ರಶಾಂತ್ ಬಳಂಜ, ತಾಲೂಕು ಪಂಚಾಯತ್ ಸಹಾಯಕ ಲೆಕ್ಕ ಅಧಿಕಾರಿ ಗಣೇಶ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಎನ್ ಆರ್ ಎಲ್ ಎಮ್ ವಲಯ ಮೇಲ್ವಿಚಾರಕರಾದ ಜಯಾನಂದ ನಿರೂಪಿಸಿದರು, ಹೊಸಂಗಡಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸ್ವಾಗತಿಸಿ, ಚಾರ್ಮಾಡಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ್ ವಂದಿಸಿದರು.

Related posts

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ : ರಾಷ್ಟ್ರೀಯ ರೈತರ ದಿನ ಆಚರಣೆ

Suddi Udaya

ಧರ್ಮಸ್ಥಳದಲ್ಲಿ ಸಂಸ್ಕೃತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya
error: Content is protected !!