23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

ವೇಣೂರು : ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವೇಣೂರು ಹೊಸ ಬಸ್ಸು ತಂಗುದಾಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭ ಸಾಮಾಜಿಕ ಪರಿಶೋಧನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ಶ್ರೀಮತಿ ಜಯಲಕ್ಷ್ಮಿ ಮತ್ತು ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ವೇಳೆ ಸ್ವಚ್ಚತಾ ವಾಹನದಲ್ಲಿ ಸಾಮಾಜಿಕ ಸಭೆಯ ಕುರಿತಂತೆ ಪ್ರಚಾರ ಮಾಡಲಾಯಿತು.

ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರಾದ ನೇಮಯ್ಯ ಕುಲಾಲ್,ಗ್ರಾ.ಪಂ ಸದಸ್ಯರು, ಗ್ರಾ.ಪಂ ಕಾರ್ಯದರ್ಶಿ ವನಜ , ದ್ವಿತೀಯ ಲೆಕ್ಕ ಸಹಾಯಕರು ರಾಜು, ಗ್ರಾ.ಪಂ ಸಿಬ್ಬಂದಿಗಳಾದ ನಾರ್ಣಪ್ಪ ಗೌಡ, ರಮೇಶ್ ನಾಯ್ಕ್, ಶ್ರೀಮತಿ ಚಂದ್ರಾವತಿ, ಶ್ರೀಮತಿ ಭವ್ಯ,ಗ್ರಾಮ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಹರಿಣಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya

ಬೆಳ್ತಂಗಡಿ ಹಳೆಕೋಟೆ ಸಮೀಪ ಧರೆಗುರುಳಿದ ಬೃಹತ್ ಮರ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!