April 1, 2025
ಅಪಘಾತತಾಲೂಕು ಸುದ್ದಿ

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತವಾದ ಘಟನೆ ಜ.3ರಂದು ನಡೆದಿದ್ದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆಂಜ ಗ್ರಾಮ ಬೆಳ್ತಂಗಡಿ ನಿವಾಸಿ ರಂಜಿತ್ (35ವ) ಎಂಬವರ ದೂರಿನಂತೆ, ಜ.3 ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಬೊಳಿಯಾರು ಎಂಬಲ್ಲಿ, ಅವರು ತಮ್ಮ ಕೆಎ11ಇಎಂ3952 ನೇ ಮೋಟಾರು ಸೈಕಲಿನಲ್ಲಿ ಹೋಗುತ್ತಿರುವಾಗ, ಅವರ ವಿರುದ್ದ ದಿಕ್ಕಿನಿಂದ ಕೆಎ70ಇ9961ನೇ ದ್ವಿಚಕ್ರ ವಾಹನವನ್ನು ಅದರ ಸವಾರಳಾದ ಸ್ವಾತಿ(26ವ) ಎಂಬವರು, ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು, ರಂಜಿತ್ ರ ಮೋಟಾರು ಸೈಕಲ್ ಗೆ ಡಿಕ್ಕಿ ಹೊಡೆದ ಪರಿಣಾಮ, ಎರಡೂ ದ್ವಿಚಕ್ರ ವಾಹನಗಳ ಸವಾರರು ರಸ್ತೆಗೆ ಬಿದ್ದು ಗಾಯಗಳಾಗಿರುತ್ತದೆ. ಗಾಯಾಳುಗಳು ಉಜಿರೆ ಎಸ್‌ಡಿಎಂ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿ ಚಿಕಿತ್ಸೆಯಲ್ಲಿರುತ್ತಾರೆ ಎಂಬುದಾಗಿ ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 03/2024 ಕಲಂ: 279,337 ಭಾ.ದಂ.ಸಂ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರಿಗೆ ಸನ್ಮಾನ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ