38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

ಬೆಳ್ತಂಗಡಿ: ವಿದ್ಯಾರ್ಥಿಗಳಿಗೆ ಸಂದರ್ಭಕ್ಕೆ ಸರಿಯಾಗಿ ಸೂಕ್ತವಾದ ಮಾಹಿತಿಗಳನ್ನು ಒದಗಿಸುವುದರಿಂದ ಅವರ ಭವಿಷ್ಯವನ್ನು ಉತ್ತಮವಾಗಿ ರೂಪಿಸಲು ಸಾಧ್ಯವಿದೆ ಎಂದು ದ.ಕ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ಹೇಳಿದರು. 

ಅವರು ವಾಣಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಜರಗಿದ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಮತ್ತು ವಿಜ್ಞಾನ ವಿಭಾಗದ ಉಪನ್ಯಾಸಕರಿಗೆ ಹಮ್ಮಿಕೊಂಡ ಸಿಇಟಿ ವಿದ್ಯಾರ್ಥಿ ಮಿತ್ರ ತರಬೇತಿ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ, ಪ್ರತಿಭಾವಂತ ವಿದ್ಯಾರ್ಥಿಗಳು ಸಣ್ಣ ಪುಟ್ಟ ತಪ್ಪುಗಳಿಂದ ಅವಕಾಶ ವಂಚಿತರಾಗದಂತೆ ಮಾಡುವುದು ಶಿಕ್ಷಕರ ಜವಾಬ್ದಾರಿಯಾಗಿದೆ. ಸೂಕ್ತವಾದ ಮಾಹಿತಿಯನ್ನು ಆಸಕ್ತ ವಿದ್ಯಾರ್ಥಿಗಳಿಗೆ ಒದಗಿಸಿಕೊಟ್ಟು ಅವರು ಗುರಿ ತಲುಪಲು ಪ್ರೇರಣೆಯನ್ನು ನೀಡಬೇಕು. ಉಪನ್ಯಾಸಕರು ಈ ಬಗ್ಗೆ ಹೆಚ್ಚು ತಿಳಿದುಕೊಂಡಿರಬೇಕು ಎಂದರು. 

ದ.ಕ. ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಜಯಾನಂದ ಸುವರ್ಣ ಕಾರ್ಯಗಾರವನ್ನು ಉದ್ಘಾಟಿಸಿದರು. ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಗಣೇಶ್ ಗೌಡ ಉಪಸ್ಥಿತರಿದ್ದರು. ಅಳದಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಜೀವಶಾಸ್ತ್ರ ಉಪನ್ಯಾಸಕರಾದ ಪ್ರಶಾಂತ್ ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಗಾರವನ್ನು ನಡೆಸಿಕೊಟ್ಟರು.

 ವಾಣಿ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ಉಪನ್ಯಾಸಕರಾದ ಹರ್ಷಿತ್ ಕುಮಾರ್ ಧನ್ಯವಾದವಿತ್ತರು. ಉಪನ್ಯಾಸಕಿ ಶ್ರೀಮತಿ ಪ್ರಜ್ವಲಾ ಎಸ್.ಕಾರ್ಯಕ್ರಮ ನಿರೂಪಿಸಿದರು.      

Related posts

ಕರ್ನಾಟಕ ಸ್ಟೇಟ್ ಟೈಲರ್ಸ್ ಎಸೋಸಿಯೇಶನ್ ಬೆಳ್ತಂಗಡಿ ಕ್ಷೇತ್ರದ ಸಾಮಾನ್ಯ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya

ಗುರುವಾಯನಕೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಕರಾಯ: ಸೈಕಲ್ ರಿಪೇರಿ ಮಾಡಿಸಿಕೊಟ್ಟಿಲ್ಲ ಎಂದು ನೇಣಿಗೆ ಶರಣಾದ ಹೈಸ್ಕೂಲ್ ವಿದ್ಯಾರ್ಥಿ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ

Suddi Udaya
error: Content is protected !!