ನಡ: ದ.ಕ ಜಿ.ಪಂ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಕ್ಷೇತ್ರ ಸಮನ್ವಯಾಧಿಕಾರಿಯವರ ಕಛೇರಿ, ಗ್ರಾ.ಪಂ. ನಡ, ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವರಿ ಸಮಿತಿ ಸಹಯೋಗದೊಂದಿಗೆ ವಿಧಾನ ಪರಿಷತ್ ಸದಸ್ಯರ ನಿಧಿ ರೂ.1.17 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆಯು ಜ.6 ರಂದು ನಡೆಯಿತು.
ನೂತನ ಕಟ್ಟಡದ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ನೆರವೇರಿಸಿದರು. ಸ್ಮಾರ್ಟ್ ಕ್ಲಾಸ್ ಉದ್ಘಾಟನೆಯನ್ನು ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಹರೀಶ್ ಪೂಂಜ ಕಾಯ೯ಕ್ರಮವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಮಂಜುನಾಥ್ ಭಂಡಾರಿ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ ಎಸ್, ನಡ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಸರಕಾರಿ ಶಿಕ್ಷಣ ಮಹಾ ವಿದ್ಯಾಲಯದ ಪ್ರಿನ್ಸಿಪಾಲ್ ಡಾ.ಸಿಪ್ರಿಯನ್ ಮೊಂತೆರೋ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಪ್ರಿನ್ಸಿಪಾಲ್ ರಾಜಲಕ್ಷೀ ಕೆ., ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಸಮನ್ವಯಾಧಿಕಾರಿ ಮೋಹನ್ ಕುಮಾರ್, ಧನಂಜಯ ಅಜ್ರಿ ನಡ ಗುತ್ತು, ನಡ ಗ್ರಾ.ಪಂ. ಉಪಾಧ್ಯಕ್ಷ ದಿವಾಕರ ಪೂಜಾರಿ, ರಾಜಶೇಖರ ಅಜ್ರಿ, ಪಂಚಾಯತಿ ಸದಸ್ಯರು ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಡ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವರಿ ಸಮಿತಿ ಅಧ್ಯಕ್ಷ ವಸಂತ ಗೌಡ, ನಡ ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧರಣೇಂದ್ರ ಕುಮಾರ್, ನಡ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿಜಯ ಗೌಡ, ನ್ಯಾಯವಾದಿ ಶಶಿಕಿರಣ್ ಜೈನ್, ಗ್ರಾ.ಪಂ ಮಾಜಿ ಅಧ್ಯಕ್ಷ ಮುನಿರಾಜ ಅಜ್ರಿ, ಸಯ್ಯದ್ ಅಬೀಬ್ ಸಾಹೇಬ್, ಪ್ರವೀಣ್ ವಿ.ಜೆ. ಹಾಗೂ ಶಾಲಾ ಶಿಕ್ಷಕ ವೃಂದ, ಮಕ್ಕಳು ಉಪಸ್ಥಿತರಿದ್ದರು.