25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು: ಸ.ಹಿ.ಪ್ರಾ ಶಾಲೆಯಲ್ಲಿ ಮೆಟ್ರಿಕ್ ಮೇಳ

ಕುವೆಟ್ಟು:ಸ ಹಿ ಪ್ರಾ ಶಾಲೆ ಕುವೆಟ್ಟು ಇಲ್ಲಿ ಮಕ್ಕಳಲ್ಲಿ ಗಣಿತದ ಮೂಲ ಕ್ರಿಯೆಗಳ ಬಗ್ಗೆ ಅರಿವನ್ನು ಹೆಚ್ಚಿಸಲು ಮೆಟ್ರಿಕ್ ಮೇಳವನ್ನು ಜ 6 ರಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿದ್ಯಾರ್ಥಿಗಳು ವಿವಿಧ ವಸ್ತುಗಳನ್ನು ತಂದು ಮಾರಾಟ ಮಾಡಿದರು. ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಗ್ರಾಹಕರಾಗಿ ವಸ್ತುಗಳನ್ನು ಖರೀದಿಸಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ಶಾಲಾ ದಾನಿಗಳಾದ ಹಾಗೂ ಎಲ್ಲ ಕಾರ್ಯಕ್ರಮಗಳಿಗೆ ಪ್ರೋತ್ಸಾಹಿಸುತ್ತಿರುವ ಹಿರಿಯ ವಿದ್ಯಾರ್ಥಿ ಮುರಳಿ ಶಾಲೆಯಲ್ಲಿ ಕಳೆದ ಬಾಲ್ಯದ ನೆನಪುಗಳನ್ನು ಹಂಚಿಕೊಳ್ಳುತ್ತಾ, ವಿದ್ಯಾರ್ಥಿಗಳಿಗೆ ಶಿಕ್ಷಣದ ಅಗತ್ಯತೆಯನ್ನು ತಿಳಿಸಿದರು. ಟಿಜಿಟಿ ಶಿಕ್ಷಕರಾದ ಸುರೇಶ್ ಶೆಟ್ಟಿ ಅವರು ಮೆಟ್ರಿಕ್ ಮೇಳದ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್.ಸಿ ಉಪಾಧ್ಯಕ್ಷೆ ಪ್ರೇಮ ಹಾಗೂ ಸದಸ್ಯರು, ಶಾಲಾ ಮುಖ್ಯೋಪಾಧ್ಯಾಯರಾದ ಭಾಸ್ಕರ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya

ಕನ್ಯಾಡಿ ಸೇವಾಭಾರತಿ ನೇತೃತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya
error: Content is protected !!