April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

ಧರ್ಮಸ್ಥಳ: ಜನವರಿ 21 ಮತ್ತು 22ರಂದು ಅಯೋದ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ವಿಶೇಷ ಆಹ್ವಾನ ಪತ್ರಿಕೆಯನ್ನು ರಾಮಮಂದಿರ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕಳುಹಿಸಿದ್ದು, ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಪ್ರಮುಖರು ಪೂಜ್ಯರಿಗೆ ಇಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಸಹ ಸಂಘ ಚಾಲಕ್ ಸುನಿಲ್ ಆಚಾರ್, ವಿಶ್ವಹಿಂದೂ ಪರಿಷತ್ ಮಂಗಳೂರು ಜಿಲ್ಲಾಧ್ಯಕ್ಷ ಎಚ್. ಕೆ ಪುರುಷೋತ್ತಮ್, ವಿಶ್ವಹಿಂದೂ ಪರಿಷತ್ ಉಪಾಧ್ಯಕ್ಷ ಮನೋಹರ್ ಸುವರ್ಣ, ವಿಶ್ವಹಿಂದೂ ಪರಿಷತ್ ಮಂಗಳೂರು ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಭಜರಂಗದಳ ಜಿಲ್ಲಾ ಸಂಚಾಲಕ ಭರತ್ ಕುಮ್ಡೇಲು, ವಿಶ್ವಹಿಂದೂ ಪರಿಷತ್ ಮಂಗಳೂರು ಕಾರ್ಯದರ್ಶಿ ಶಿವಾನಂದ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.

Related posts

ಇಂದಬೆಟ್ಟು ಗ್ರಾ.ಪಂ ವಿವಿಧ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ ದೂರು: ಎರಡು ದಿನಗಳಲ್ಲಿ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಕಡತ ಪರಿಶೀಲನೆ-ಸ್ಥಳ ತನಿಖೆ

Suddi Udaya

ಮರೋಡಿ-ಪೆರಾಡಿ ಗ್ರಾಮಗಳಲ್ಲಿ ಮಹಾಮಳೆಗೆ ಅನಾಹುತ, ಅಗತ್ಯ ಕ್ರಮ ಕೈಗೊಂಡ ಪಂಚಾಯತ್ ಆಡಳಿತ

Suddi Udaya

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya

ಚಾರ್ಮಾಡಿಯಲ್ಲಿ ಕಾಡುಪ್ರಾಣಿ ಬೇಟೆ ಪ್ರಕರಣ: ಇಬ್ಬರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!