ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ವನದುರ್ಗ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಪೂರ್ವಭಾವಿ ಸಭೆ ಜ.7ರಂದು ದೇವಸ್ಥಾನದ ವಠಾರದಲ್ಲಿ ಜರುಗಿತು.
ಸಭೆಯ ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶ್ರೀರಂಗ ದಾಮ್ಲೆ ವಹಿಸಿದ್ದರು. ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಶಾಸಕ ಹರೀಶ್ ಪೂಂಜ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಆಡಳಿತ ಸಮಿತಿ ಅಧ್ಯಕ್ಷ ಪದ್ಮಯ್ಯ ಬಾರಿಗ, ಶ್ರೀ ಕ್ಷೇ. ಧ. ಗ್ರಾ. ಯೋಜನೆಯ ಮೈಸೂರು ಪ್ರಾದೇಶಿಕ ನಿರ್ದೇಶಕ ಜಯರಾಮ ನೆಲ್ಲಿತ್ತಾಯ ಶಿಶಿಲ, ಅರಸಿನಮಕ್ಕಿ ಗ್ರಾ. ಪಂ. ಅಧ್ಯಕ್ಷ ಗಾಯತ್ರಿ, ಉದ್ಯಮಿ ವಾಮನ ತಾಮ್ಹಣ್ ಕರ್, ಶಿಬಾಜೆ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ರಾಘವೇಂದ್ರ ನಾಯಕ್, ಬೂಡುಮುಗೇರು ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೆಸರ ರಾಜಗೋಪಾಲ್ ರಾವ್, ಕಳೆಂಜ ದೇವಸ್ಥಾನದ ಮಾಜಿ ಅಧ್ಯಕ್ಷ ಅರವಿಂದ ಕುಡ್ವ, ಪ್ರೇಮಚಂದ್ರ ರಾವ್ ಪೆರ್ಲ, ಮಂಜುಳಾ ಕಾರಂತ್ ಅರಸಿನಮಕ್ಕಿ, ಜೀರ್ಣೋದ್ದಾರ /ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಮುರಳೀಧರ ಶೆಟ್ಟಿಗಾರ್ ಉಪಸ್ಥಿತರಿದ್ದು, ಸಲಹೆ ಸೂಚನೆ ನೀಡಿದರು.
ಪ್ರಕಾಶ್ ಪಿಲಿಕ್ಕಬೆ ಸ್ವಾಗತಿಸಿ, ವೃಶಾಂಕ್ ಖಾಡಿಲ್ಕರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ವಿವಿಧ ಸಮಿತಿಗಳ ಸಂಚಾಲಕರು ಉಪಸ್ಥಿತರಿದ್ದು ಇದುವರೆಗೆ ಆದ ಕೆಲಸಗಳ ಮಾಹಿತಿ ನೀಡಿದರು. ಸಭೆಯಲ್ಲಿ ಸಮಿತಿಗಳ ಸಂಚಾಲಕರು, ಉಪ ಸಂಚಾಲಕರು, ಬ್ರಹ್ಮಕಲಶೋತ್ಸವ/ ಜೀರ್ಣೋದ್ದಾರ /ಆಡಳಿತ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಊರ ಪರವೂರ ಗ್ರಾಮಸ್ಥರು ಉಪಸ್ಥಿತರಿದ್ದರು.